ಕರ್ನಾಟಕ

karnataka

ETV Bharat / state

ಮಹಿಳೆಯರು ಅಡುಗೆ ಮನೆಗೆ ಸೀಮಿತ ವಿಚಾರ: ಹೇಳಿಕೆ ತಿರುಚಲಾಗಿದೆ ಎಂದು ಶಿವಶಂಕರಪ್ಪ ಸ್ಪಷ್ಟನೆ - Shamanur Shivashankarappa

ಮಹಿಳೆಯರ ಕುರಿತಾದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ತಿರುಚಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.

ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ

By ETV Bharat Karnataka Team

Published : Apr 3, 2024, 7:15 AM IST

ದಾವಣಗೆರೆ: "ಮಹಿಳೆಯರು ಅಡುಗೆ ಮನೆಗೆ ಸೀಮಿತ"ಎಂಬ ಹೇಳಿಕೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಸ್ಪಷ್ಟ ಪಡಿಸಿರುವ ಶಾಸಕ ಶಾಮನೂರು ಶಿವಶಂಕರಪ್ಪನವರು,"ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬಗ್ಗೆ ನಾನು ದ್ವೇಷದಿಂದ ಈ ರೀತಿ ಹೇಳಿಕೆ ಕೊಟ್ಟಿದ್ದೇನೆ ಎಂದು ನನಗೆ ಆಗದವರು ಸುಳ್ಳು ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ" ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

"ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಛಾಪು ಮೂಡಿಸಿದ್ದಾರೆ, ಮಹಿಳೆಯರು ಅಡುಗೆ ಮನೆಗೆ ಸೀಮಿತವಲ್ಲ ಎಂಬುದನ್ನು ನಮ್ಮ ಪಕ್ಷದ ದಿವಂಗತ ಇಂದಿರಾಗಾಂಧಿಯವರು ಸಾಬೀತುಪಡಿಸಿದ್ದಾರೆ. ಅದೇ ರೀತಿ, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲೂ ಮಹಿಳೆಯರೇ ಸ್ಪರ್ಧಿಸಿದ್ದು, ನಿಮ್ಮ ಸಮಸ್ಯೆಯನ್ನು ದೆಹಲಿಯವರೆಗೆ ತಲುಪಿಸುವವರಿಗೆ ಮತ ನೀಡಿ"ಎಂದು ಹೇಳಿದ್ದೇನೆ. ಆದರೆ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಶಾಮನೂರು ಆರೋಪ ಮಾಡಿದ್ದಾರೆ.

ಇನ್ನು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ ಇಲ್ಲಿನ ಸಹಾಯಕ ಚುನಾವಣಾಧಿಕಾರಿ ಲಿಖಿತವಾಗಿ ಸಮಜಾಯಿಷಿ ನೀಡುವಂತೆ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಕೋರಿದ್ದರು.

ಇದರಿಂದ ಚುನಾವಣಾ ಆಯೋಗಕ್ಕೆ ಶಾಮನೂರು ಶಿವಶಂಕರಪ್ಪ ತಮ್ಮ ಹೇಳಿಕೆ ಬಗ್ಗೆ ಪತ್ರ ರವಾನೆ ಮಾಡಿದ್ದಾರೆ. ಇಷ್ಟೇ ಅಲ್ಲದೇ ಈ ಹೇಳಿಕೆಯಿಂದ ದಾವಣಗೆರೆ ಜಿಲ್ಲಾ ಬಿಜೆಪಿ ಕೆಂಡವಾಗಿತ್ತು. ಇದನ್ನೇ ಚುನಾವಣೆ ಅಸ್ತ್ರವಾಗಿ ಬಿಜೆಪಿ ಬಳಕೆ‌ ಮಾಡಿಕೊಂಡಿದ್ದು, ಅಡುಗೆ ಮಾಡಿ ಉಪಾಹಾರ ತಯಾರು ಮಾಡಿ ಆಂದೋಲನ ಮಾಡಲು ಬಿಜೆಪಿ ಪ್ಲಾನ್ ಹಾಕಿಕೊಂಡಿದೆ. ಈ ಆಂದೋಲನ ಇಂದು ಆರಂಭವಾಗಲಿದ್ದು, ಶಾಮನೂರು ಶಿವಶಂಕರಪ್ಪ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ನಾಯಕರ ಒಕ್ಕೊರಲ ಒತ್ತಾಯವಾಗಿದೆ.

ಇದನ್ನೂ ಓದಿ:ಸ್ತ್ರೀ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್​ ಶಾಸಕ ಶಾಮನೂರುಗೆ ಸೈನಾ ನೆಹ್ವಾಲ್​ ರಿವರ್ಸ್​ ಸ್ವೀಪ್​ - anti women remark

ABOUT THE AUTHOR

...view details