ಕರ್ನಾಟಕ

karnataka

ETV Bharat / state

'ಬಂಡವಾಳ ಹೂಡಿಕೆ ಬಗ್ಗೆ ಅಪಪ್ರಚಾರ ಮಾಡುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು' - D K Shivakumar

ಬಂಡವಾಳ ಹೂಡಿಕೆ ವಿಚಾರವಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕಯಾಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

capital investment issue  DCM DK Shivakumar  Bengaluru
ಡಿ.ಕೆ.ಶಿವಕುಮಾರ್ (ETV Bharat)

By ETV Bharat Karnataka Team

Published : May 24, 2024, 1:33 PM IST

ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ (ETV Bharat)

ಬೆಂಗಳೂರು:ಬಂಡವಾಳ ಹೂಡಿಕೆದಾರರು ನೆರೆ ರಾಜ್ಯಗಳಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವ ವಿಚಾರವಾಗಿ ಬಿಜೆಪಿ ನಾಯಕರ ಟೀಕೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ''ಈ ರೀತಿ ಟ್ವೀಟ್ ಮಾಡಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಅವರು ದಾಖಲೆಗಳನ್ನು ಪರಿಶೀಲಿಸಿ ಮಾತನಾಡಬೇಕು. ಬಿಜೆಪಿಯ ದುರಾಡಳಿತ, ಕಿರುಕುಳಕ್ಕೆ ಬೇಸತ್ತು ಲಕ್ಷಾಂತರ ಉದ್ದಿಮೆದಾರರು, ವ್ಯಾಪಾರಿಗಳು ದೇಶ ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಂಡವಾಳ ಹೂಡಿಕೆದಾರರು ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ" ಎಂದರು.

''ನಮ್ಮ ಕೈಗಾರಿಕಾ ಸಚಿವರು ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಈ ವಿಚಾರವಾಗಿ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ನೀಡುತ್ತೇವೆ. ಕರ್ನಾಟಕ ಪ್ರಗತಿ, ಅಭಿವೃದ್ಧಿ ಹಾಗೂ ಶಾಂತಿಯ ನಾಡು ಎಂದು ಇಡೀ ದೇಶಕ್ಕೇ ಗೊತ್ತಿದೆ. ನಮ್ಮ ರಾಜ್ಯ ಹಾಗೂ ಬೆಂಗಳೂರನ್ನು ಇಡೀ ವಿಶ್ವವೇ ನೋಡುತ್ತಿದೆ'' ಎಂದು ತಿಳಿಸಿದರು.

I am sorry, ಕಾಮೆಂಟ್ ಮಾಡಲ್ಲ:ಪ್ರಜ್ವಲ್ ರೇವಣ್ಣ ಅವರ ವಿಚಾರವಾಗಿ ದೇವೇಗೌಡರ ಪತ್ರದ ಬಗ್ಗೆ ಕೇಳಿದಾಗ, ''I am sorry, ಇದು ಅವರ ಕುಟುಂಬದ ವಿಚಾರ. ಈ ವಿಚಾರವಾಗಿ ನಾನು ಮಾತನಾಡುವುದಿಲ್ಲ'' ಎಂದರು.

ಸಿಎಂ ಹಾಗೂ ಡಿಸಿಎಂ ನಗರ ಪ್ರದಕ್ಷಿಣೆ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಅವರ ಟೀಕೆ ಬಗ್ಗೆ ಕೇಳಿದಾಗ, ''ಅವರು ಏನಾದರೂ ಟೀಕೆ ಮಾಡಲಿ. ನಾವು ಜನರಿಗಾಗಿ ಕೆಲಸ ಮಾಡುತ್ತೇವೆ. ನಾವು ಜನರಿಗಾಗಿ ಇದ್ದೇವೆ. ಜನ ನಮ್ಮ ಪರವಾಗಿ ಇರುತ್ತಾರೆ'' ಎಂದು ಉತ್ತರಿಸಿದರು.

ಇದನ್ನೂ ಓದಿ:ಪ್ರಜ್ವಲ್​ ವಿದೇಶಕ್ಕೆ ಹೋಗುವ ಮೊದ್ಲು ಇವರೇನು ಕತ್ತೆ ಕಾಯ್ತಿದ್ರಾ?: ಪ್ರಹ್ಲಾದ್ ಜೋಶಿ - Pralhad Joshi

ABOUT THE AUTHOR

...view details