ಕರ್ನಾಟಕ

karnataka

ETV Bharat / state

ಬಾಳೆಹೊನ್ನೂರು ಮಠಕ್ಕೆ ರೋಬೋಟಿಕ್ ಆನೆ ಉಡುಗೊರೆ ನೀಡಿದ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ದಂಪತಿ - ROBOTIC ELEPHANT

ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್ ಪುರ ತಾಲೂಕಿನ ಭದ್ರಾ ನದಿ ತಟದಲ್ಲಿರುವ ರಂಭಾಪುರಿ ಮಠಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ದಂಪತಿ ರೋಬೋಟಿಕ್ ಆನೆಯನ್ನ ಉಡುಗೊರೆಯಾಗಿ ನೀಡಿದ್ದಾರೆ.

Robotic elephant
ರೋಬೋಟಿಕ್ ಆನೆ (ETV Bharat)

By ETV Bharat Karnataka Team

Published : Dec 15, 2024, 3:45 PM IST

ಚಿಕ್ಕಮಗಳೂರು : ಜಿಲ್ಲೆಯ ಎನ್​. ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ಶ್ರೀ ರಂಭಾಪುರಿ ಮಠಕ್ಕೆ ಬಾಲಿವುಡ್​ನ ಖ್ಯಾತ ತಾರೆ ಶಿಲ್ಪಾ ಶೆಟ್ಟಿ ದಂಪತಿ ರೋಬೋಟಿಕ್ ಆನೆಯನ್ನ ಉಡುಗೊರೆಯಾಗಿ ನೀಡಿದ್ದಾರೆ.

ಇದು ರೋಬೋಟಿಕ್ ಆನೆಯಾಗಿದ್ದು, ನೋಡುವುದಕ್ಕೆ ಯಥಾವತ್ತಾಗಿ ನೈಜ ಆನೆಯಂತೆಯೇ ಕಾಣಿಸುತ್ತದೆ. ಸದಾ ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನ ಅಲುಗಾಡಿಸುತ್ತಿರುತ್ತದೆ. ನೋಡಲು ದೈತ್ಯ ಗಾತ್ರದಾಗಿದ್ದು, ಸದಾ ಆಕ್ಟೀವ್ ಆಗಿರುವ ಈ ಆನೆಯನ್ನು ನೋಡಿದವರಿಗೆ ಜೀವಂತ ಆನೆಯೇ ಇಲ್ಲಿ ನಿಂತುಕೊಂಡಿದೆ ಎಂಬಂತೆ ಭಾಸವಾಗುತ್ತದೆ.

ಬಾಳೆಹೊನ್ನೂರು ಮಠಕ್ಕೆ ರೋಬೋಟಿಕ್ ಆನೆ ಉಡುಗೊರೆ ನೀಡಿದ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ದಂಪತಿ (ETV Bharat)

ದೇಶದ ಪಂಚಪೀಠಗಳಲ್ಲೇ ರಂಭಾಪುರಿ ಮಠವು ಮೊದಲ ಪೀಠವಾಗಿದೆ. ಈ ಮಠದ ಭಕ್ತರಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ದಂಪತಿ ಆಗಿಂದಾಗ್ಗೆ ಮಠಕ್ಕೆ ಭೇಟಿ ನೀಡುತ್ತಿರುತ್ತಾರೆ. ಇದೀಗ ಒಂದು ಸಂಕಲ್ಪವನ್ನು ಮಾಡಿಕೊಂಡು ಮಠಕ್ಕೆ ರೋಬೋಟಿಕ್ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ.

ನೈಸರ್ಗಿಕ ಆನೆಯನ್ನು ನೀಡುವುದಕ್ಕೆ ಹಲವು ನಿಯಮಗಳು ಅಡ್ಡಿ ಬರುವ ಹಿನ್ನೆಲೆ ಇದೀಗ ರೋಬೋಟಿಕ್ ಆನೆ ದಾನ ನೀಡುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ಕೊಡುಗೆಯಿಂದ ಮಠದ ಭಕ್ತರು ಸಂತೋಷಗೊಂಡಿದ್ದು, ನೂರಾರು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ :ತುಮಕೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ಬಂತು ಯಾಂತ್ರಿಕ ಆನೆ 'ನಿರಂಜನಾ' - Mechanical Elephant - MECHANICAL ELEPHANT

ABOUT THE AUTHOR

...view details