ಕರ್ನಾಟಕ

karnataka

ETV Bharat / state

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ರೋಶ: ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ - Congress Protest

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ನಗರದಲ್ಲಿ ಪ್ರತಿಭಟನೆ ನಡೆಸಿದರು.

CONGRESS PROTEST
ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ (ETV Bharat)

By ETV Bharat Karnataka Team

Published : Aug 19, 2024, 4:43 PM IST

ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ (ETV Bharat)

ಶಿವಮೊಗ್ಗ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ರಾಜ್ಯಪಾಲರ ವಿರುದ್ಧ ಇಂದು ಪ್ರತಿಭಟನೆ ನಡೆಸಿತು.

ಶಿವಪ್ಪ‌ನಾಯಕ ವೃತ್ತದಲ್ಲಿ ಪ್ರತಿಭಟನೆ ಪ್ರಾರಂಭಿಸಿದ ಕಾಂಗ್ರೆಸ್​, ಇಲ್ಲಿಂದ ಅಮೀರ್ ಅಹಮದ್ ವೃತ್ತ, ನೆಹರು ರಸ್ತೆ, ಟಿ.ಶೀನಪ್ಪ ವೃತ್ತ, ಬಾಲರಾಜ್ ರಸ್ತೆಯ ಮೂಲಕ ಮಹಾವೀರ ವೃತ್ತದಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ರಾಷ್ಟ್ರಪತಿಗಳು ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಬೇಕೆಂದು ಆಗ್ರಹಿಸಿದರು.

ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಲಾಯಿತು. ತಕ್ಷಣ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಎಡಿಸಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಆಯನೂರು ಮಂಜುನಾಥ್, ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್, ರಾಜ್ಯ ಸಂಬಾರು ಅಭಿವೃದ್ಧಿ ನಿಗಮದ ಅಧ್ಯಕ್ಷ ಪಲ್ಲವಿ ಸೇರಿ ಇತರ ಮುಖಂಡರಿದ್ದರು.

ಇದಕ್ಕೂ ಮುನ್ನ ಮಾತನಾಡಿದ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ರಾಜ್ಯಪಾಲರ ನಡೆಯಿಂದ ಪ್ರಜಾಪ್ರಭುತ್ವದ ಕೊಲೆಯಾಗಿದೆ. ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿರೋದು ರಾಜ್ಯಪಾಲರಿಗೆ ಗೌರವ ತರುವುದಿಲ್ಲ. ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರಿಗೆ ನಾನು ದಿಕ್ಕಾರ ಹೇಳುವೆ ಎಂದರು.

136 ಸೀಟ್ ಗೆದ್ದಿದ್ದೀವಿ, ಬಿಜೆಪಿಯವರು ಏನನ್ನೂ ಮಾಡಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಬಗ್ಗೆ ಮಾತನಾಡೋಕೆ ಅವರಿಗೆ ತಾಕತ್ ಮತ್ತು ಧಮ್​ ಬೇಕು. ಎಲ್ಲ ಶಾಸಕರು ಸಿದ್ದರಾಮಯ್ಯ ಪರ ಇದ್ದೀವಿ. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಬೀಳುವುದಕ್ಕೆ ಆಗೋಲ್ಲ ಎಂದು ವಿಜಯೇಂದ್ರ ವಿರುದ್ಧ ಕಿಡಿ ಕಾರಿದರು.

ಇದನ್ನೂ ಓದಿ:ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ - Congress Protest Against Governor

ABOUT THE AUTHOR

...view details