ಮಂಡ್ಯ: "ರಾಜ್ಯದಲ್ಲಿ ದಲಿತ ಸಿಎಂ ಆಗ್ತಾರೆ ಎನ್ನುವ ಪ್ರಶ್ನೆಯೇ ಉದ್ಭವಿಸಲ್ಲ. ಈಗಾಗಲೇ ಸಿದ್ದರಾಮಯ್ಯ ಅವರು ಸಿಎಂ ಆಗಿರುವಾಗ, ಮತ್ತೆ ದಲಿತ ಅಥವಾ ಜನರಲ್ ಸಿಎಂ ಆಗ್ತಾರೆ ಎನ್ನುವ ಚರ್ಚೆ ಅನವಶ್ಯಕ. ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ" ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಶ್ರೀರಂಗಪಟ್ಟಣದಲ್ಲಿ ದಲಿತ ಸಿಎಂ ಬಗ್ಗೆ ಚರ್ಚೆಯಾಗುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ: ಸತೀಶ್ ಜಾರಕಿಹೊಳಿ - SATISH JARAKIHOLI
ಈಗಾಗಲೇ ಸಿದ್ದರಾಮಯ್ಯ ಅವರು ಸಿಎಂ ಆಗಿರುವಾಗ ಮತ್ತೆ ದಲಿತ ಸಿಎಂ ಆಗ್ತಾರೆ ಎನ್ನುವ ಪ್ರಶ್ನೆಯೇ ಹುಟ್ಟುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
Published : Oct 8, 2024, 10:35 AM IST
|Updated : Oct 8, 2024, 12:13 PM IST
ಪಕ್ಷಕ್ಕಾಗಿ 12 ಗಂಟೆ ದುಡಿತಿದ್ದೀನಿ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, "ಪಕ್ಷಕ್ಕಾಗಿ ದುಡಿಯುತ್ತಿರುವ ನನ್ನನ್ನು ಪಕ್ಷ ಗುರುತಿಸಬೇಕು. ಯಾರೋ ಕೆಲಸ ಮಾಡದಿದ್ದವರು ಮುಂದೆ ಬರ್ತಾರೆ. ಕೆಲಸ ಮಾಡೋರು ಪಕ್ಷದಲ್ಲಿ ಹಿಂದುಳಿಯುತ್ತಿದ್ದಾರೆ. ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಬೇಕು ಎನ್ನುವ ಹಿನ್ನೆಲೆಯಲ್ಲಿ ಆ ರೀತಿ ಹೇಳಿದೆ ಅಷ್ಟೇ. ಸಿಎಂ ಬದಲಾವಣೆ ಬಗ್ಗೆ ಯಾವುದೇ ಒಪ್ಪಂದ ಆಗಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ" ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಅವಧಿ ಅಂತಿಮವಾಗುವವರೆಗೂ ಸಿದ್ದರಾಮಯ್ಯನವರೇ ಸಿಎಂ: ಡಿ.ಕೆ. ಸುರೇಶ್