ಬೆಂಗಳೂರು:''ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ತಮ್ಮ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿ, ರಾಜ್ಯದ ಜನತೆಯ ಕ್ಷಮೆ ಕೇಳಬೇಕು'' ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
"ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ರಚಿಸಿದೆ ಎಂಬ ಗುತ್ತಿಗೆದಾರರ ಆಪಾದನೆ ಸರಿ ಇದ್ದಂತಿದೆ" ಎಂದು ಹೈಕೋರ್ಟ್ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ.
ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆಪಾದನೆ ಮಾಡಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ ಈಗ ಕಮಿಷನ್ ಕೊಟ್ಟವರಿಗೆ ಮಾತ್ರ ಬಿಲ್ ಕೊಟ್ಟು, ಕಮಿಷನ್ ಕೊಡದವರಿಗೆ ಹಣ ಬಿಡುಗಡೆ ಮಾಡದೆ ತನಿಖಾ ಆಯೋಗದ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ'' ಎಂದು ಟ್ವೀಟ್ ಮೂಲಕ ಆರ್.ಅಶೋಕ್ ಆರೋಪಿಸಿದ್ದಾರೆ.