ಬೆಂಗಳೂರು:ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ತನಿಖೆಯ ಅಗತ್ಯವಿರುವುದರಿಂದ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿದೆ. ಮೇ 2ರಂದು ಕೆ.ಆರ್.ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮೇ 15ರಂದು ಎಸ್ಐಟಿ ಮೊದಲ ನೋಟಿಸ್ ನೀಡಿತ್ತು.
ಅಶ್ಲೀಲ ವಿಡಿಯೋ ಸಂತ್ರಸ್ತೆಯ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ 2ನೇ ನೋಟಿಸ್ ಜಾರಿ - Bhavani Revanna - BHAVANI REVANNA
ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ 2ನೇ ನೋಟಿಸ್ ನೀಡಿದೆ.

ಭವಾನಿ ರೇವಣ್ಣ (ETV Bharat)
Published : May 31, 2024, 1:24 PM IST
ಈ ನೋಟಿಸ್‌ಗೆ ಪ್ರತಿಯಾಗಿ ಪ್ರಕರಣದಲ್ಲಿ ತನಿಖೆಗೆ ಅಗತ್ಯವಿದ್ದರೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ತಾವು ಇರುವುದಾಗಿ ಪತ್ರದ ಮುಖೇನ ತಿಳಿಸಿದ್ದೀರಿ. ಪ್ರಕರಣದಲ್ಲಿ ನಿಮ್ಮ ವಿಚಾರಣೆ ಅಗತ್ಯವಿದ್ದು ಜೂನ್ 1ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗಿನ ಅವಧಿಯಲ್ಲಿ ನೀವು ತಿಳಿಸಿರುವ ವಿಳಾಸಕ್ಕೆ ತನಿಖಾಧಿಕಾರಿಗಳು ಬರುತ್ತಿದ್ದು, ಆ ಸಂದರ್ಭದಲ್ಲಿ ತಾವು ಹಾಜರಿರಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ವೈದ್ಯಕೀಯ ತಪಾಸಣೆಗೆ ಬೌರಿಂಗ್ ಆಸ್ಪತ್ರೆಯಲ್ಲಿ ಸಿದ್ಧತೆ - Prajwal Revanna