ಕರ್ನಾಟಕ

karnataka

ETV Bharat / state

ಪ್ರಜ್ವಲ್ ರೇವಣ್ಣ ಪ್ರಕರಣ: ಭವಾನಿ ರೇವಣ್ಣಗೆ ಎಸ್​ಐಟಿ ನೋಟಿಸ್ - SIT Notice to Bhavani Revanna - SIT NOTICE TO BHAVANI REVANNA

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಬರುವಂತೆ ಭವಾನಿ ರೇವಣ್ಣ ಅವರಿಗೆ ಎಸ್​ಐಟಿ ನೋಟಿಸ್ ನೀಡಿದೆ.

ಭವಾನಿ ರೇವಣ್ಣ
ಭವಾನಿ ರೇವಣ್ಣ (Etv Bharat)

By ETV Bharat Karnataka Team

Published : May 4, 2024, 9:39 AM IST

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಎಸ್‌ಐಟಿ ನೋಟಿಸ್‌ ರವಾನಿಸಿದೆ. ಸ್ಥಳಿಯ ಪೊಲೀಸರ ಮೂಲಕ ಹಾಸನದಲ್ಲಿರುವ ರೇವಣ್ಣ ನಿವಾಸಕ್ಕೆ ಎಸ್ಐಟಿ ನೋಟಿಸ್‌ ರವಾನಿಸಿದೆ.

ಹಾಸನದ ಸ್ಥಳೀಯ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ಅಜಯ್ ಕುಮಾರ್ ಜೊತೆ ಸಿಬ್ಬಂದಿ ಶುಕ್ರವಾರ ರೇವಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ, ಭವಾನಿ ರೇವಣ್ಣ ಅವರಿಗೆ ನೋಟಿಸ್ ತಲುಪಿಸಿದೆ. ಶನಿವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ ಎಂದು ವಿಶೇಷ ತನಿಖಾ ತಂಡದ ಮೂಲಗಳು ಮಾಹಿತಿ ನೀಡಿವೆ.

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿಸಿದೆ. ಪ್ರಕರಣ ಸಂಬಂಧ ಎಸ್​ಐಟಿ ತನಿಖೆ ಚುರುಕುಗೊಂಡಿದ್ದು, ಈಗಾಗಲೇ ರೇವಣ್ಣ, ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿ ಮಾಡಿತ್ತು. ಈ ಮಧ್ಯೆ ಪ್ರಜ್ವಲ್ ವಿರುದ್ಧ ಸಿಐಡಿಯಲ್ಲಿ ಮತ್ತೊಂದು ಎಫ್​ಐಆರ್ ದಾಖಲಾಗಿದೆ. 'ಪ್ರಜ್ವಲ್ ರೇವಣ್ಣ ಬ್ಲ್ಯಾಕ್​​ಮೇಲ್​​ ಮಾಡಿ ತಮ್ಮ ಮೇಲೆ ಅತ್ಯಾಚಾರ ಮಾಡಿದ್ದಾರೆ' ಎಂದು ಮಹಿಳೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ.

ಇನ್ನು ಮಹಿಳೆಯೊಬ್ಬರ ಅಪಹರಣ ಆರೋಪ ಪ್ರಕರಣ ಸಂಬಂಧ ಹೆಚ್​.ಡಿ.ರೇವಣ್ಣ ವಿರುದ್ಧ ಮೈಸೂರಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ:ಲೈಂಗಿಕ ಕಿರುಕುಳ ಆರೋಪ ಪ್ರಕರಣ: ಹೆಚ್‌.ಡಿ.ರೇವಣ್ಣಗೆ ಲುಕ್‌ಔಟ್ ನೋಟಿಸ್ ಜಾರಿ - Lookout Notice To H D Revanna

ಇದನ್ನೂ ಓದಿ:ರಾಜತಾಂತ್ರಿಕ ಪಾಸ್‌ಪೋರ್ಟ್ ಎಂದರೇನು?, ಇದರಿಂದ ಸಂಸದರಿಗೆ ಸಿಗುವ ಸವಲತ್ತುಗಳೇನು? - Diplomatic Passport

ABOUT THE AUTHOR

...view details