ಕಾರವಾರ (ಉತ್ತರ ಕನ್ನಡ): ಪ್ರವಾಸಕ್ಕೆ ಆಗಮಿಸಿದ್ದ ಒಂದೇ ಕುಟುಂಬದ ಆರು ಮಂದಿ ಕಾಳಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ದಾಂಡೇಲಿಯ ಅಕೊರ್ಡಾ ಬಳಿ ಭಾನುವಾರ ನಡೆದಿದೆ.
ಮೃತರನ್ನು ಹುಬ್ಬಳ್ಳಿ ಮೂಲದ ನಜೀರ ಅಹ್ಮದ್ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್ (6), ರೇಷಾ ಉನ್ನಿಸಾ (38), ಇಫ್ರಾ ಅಹ್ಮದ್ (15), ಅಬೀದ್ ಅಹ್ಮದ್ (12) ಎಂದು ಗುರುತಿಸಲಾಗಿದೆ.
ಒಟ್ಟು ಎಂಟು ಮಂದಿ ಭಾನುವಾರ ರಜೆ ಇರುವ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ಆಗಮಿಸಿದ್ದರು. ಇಬ್ಬರು ಮಹಿಳೆಯರನ್ನು ಹೊರತುಪಡಿಸಿ ಮಕ್ಕಳು ಸೇರಿ ಉಳಿದ ಆರು ಮಂದಿ ಕಾಳಿ ನದಿಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಕಾಲು ಜಾರಿ ನದಿಯಲ್ಲಿ ಮುಳುಗಿದ್ದು ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಉಳಿದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಸದ್ಯ ಮೃತದೇಹಗಳನ್ನು ದಾಂಡೇಲಿ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಓದಿ:ವ್ಯಾನ್ಗೆ ಟ್ರಕ್ ಡಿಕ್ಕಿ: ಮದುವೆ ಮುಗಿಸಿ ವಾಪಸ್ ಬರುತ್ತಿದ್ದ 9 ಜನರ ದುರ್ಮರಣ - Rajasthan Road Accident