ಬೆಂಗಳೂರು: ಗ್ರಾಮಾಂತರ ಜಿಲ್ಲಾ ಪೊಲೀಸ್ ಎಸ್ಪಿ ಕಚೇರಿ ಆವರಣವನ್ನು ಅತಿಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಿಸುತ್ತಿದ್ದ 6 ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಎಂ.ಡಿ.ಹನೀಫ್, ರಾಜಶೇಖರ್, ಉಲ್ಲಾಳದ ಮೊಹಮ್ಮದ್ ನದೀಂ, ಸಂಜಯನಗರದ ಮೋಹನ್ ಶೆಟ್ಟಿ, ಗಣಪತಿ ಹಾಗೂ ಜಹೀರ್ ಅಹಮದ್ ಬಂಧಿತ ಆರೋಪಿಗಳು.
ಪ್ರಕರಣದ ವಿವರ:ಜೂನ್ 3ರಂದು ಮಧ್ಯಾಹ್ನ ಮಿಲ್ಲರ್ಸ್ ರಸ್ತೆಯಲ್ಲಿರುವ ಕೇಂದ್ರ ವಲಯ ಐಜಿಪಿ ಕಚೇರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಕಚೇರಿಯ ಆವರಣದೊಳಗೆ ಅತಿಕ್ರಮವಾಗಿ ಪ್ರವೇಶಿಸಿದ್ದ ಆರೋಪಿಗಳು, ವಿಡಿಯೋ ಚಿತ್ರೀಕರಿಸುತ್ತಿದ್ದರು. ಇದನ್ನು ಗಮನಿಸಿ ಎಸ್ಟೇಟ್ ಆಫೀಸರ್ ಸಂತೋಷ್ ಗೌಡ ಪ್ರಶ್ನಿಸಿದ್ದರು. ಈ ವೇಳೆ ಆರೋಪಿಗಳು, "ಈ ಸ್ವತ್ತಿನ ದಾಖಲಾತಿಗಳು ನಮ್ಮ ಬಳಿ ಇವೆ. ನಾವು ಚಿತ್ರೀಕರಣ ಮಾಡುತ್ತೇವೆ. ನಮ್ಮನ್ನು ಕೇಳಲು ನೀನು ಯಾರು?" ಎಂದಿದ್ದರು.