ಕರ್ನಾಟಕ

karnataka

ETV Bharat / state

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷ ರೂ.ಗೆ ಹೆಚ್ಚಳ: ಸಚಿವ ಮಹದೇವಪ್ಪ

ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರ್ಕಾರ ಮಾಡಿದೆ. ಇದರಿಂದ ಉನ್ನತ ಶಿಕ್ಷಣ ಪಡೆಯಬೇಕೆಂಬ ವಿದ್ಯಾರ್ಥಿಗಳ ಕನಸು ನನಸಾಗಲಿದೆ.

Social welfare ministry increse incentive amount for SC ST Student higher Eduction
ಎಚ್​ಸಿ ಮಹದೇವಪ್ಪ (ಈಟಿವಿ ಭಾರತ್​​)

By ETV Bharat Karnataka Team

Published : Nov 7, 2024, 5:43 PM IST

ಬೆಂಗಳೂರು: ಐಐಟಿ, ಐಐಎಂ, ಐಐಎಸ್ಸಿ, ಎನ್​ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.‌

ಪಿಯುಸಿ ಪರೀಕ್ಷೆಯಲ್ಲಿ 95ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್. ಸಿ. ಮಹದೇವಪ್ಪ ತಿಳಿಸಿದರು.

ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ ಶೇ 60ರಷ್ಟಕ್ಕೂ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು. ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರ್ಕಾರ ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸು ನನಸಾಗಲಿದೆ ಎಂದಿದ್ದಾರೆ.

ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಸಚಿವ ಮಾಹಿತಿ ನೀಡಿದರು.

ಇದನ್ನೂ ಓದಿ: ಹಾವೇರಿ: ಕೆರೆಗೆ ಬಿದ್ದ ಹೋರಿ ರಕ್ಷಿಸಲು ಹೋಗಿ ಇಬ್ಬರು ನೀರುಪಾಲು

ABOUT THE AUTHOR

...view details