ಕರ್ನಾಟಕ

karnataka

ETV Bharat / state

ಬೆಳಗಾವಿ: ಕೆರೆಗೆ ಹಾರಿ ಯೋಧ ಆತ್ಮಹತ್ಯೆ - SOLDIER COMMITS SUICIDE

20 ದಿನಗಳ ರಜೆ ಮುಗಿಸಿ ನಿನ್ನೆ ಮತ್ತೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೊರಟ ಯೋಧ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

SOLDIER COMMITS SUICIDE BY JUMPING INTO LAKE IN BELAGAVI
ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಯೋಧ (ETV Bharat)

By ETV Bharat Karnataka Team

Published : Nov 24, 2024, 12:46 PM IST

Updated : Nov 24, 2024, 1:52 PM IST

ಬೆಳಗಾವಿ: ಭಾರತೀಯ ಸೇನೆಯ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ಕಿತ್ತೂರು ತಾಲ್ಲೂಕಿನ ದೇಗಾಂವ ಗ್ರಾಮದ ಯೋಧ ನರೇಶ ಯಲ್ಲಪ್ಪ ಆಗಸರ (28) ಸಾವನ್ನಪ್ಪಿದ್ದಾರೆ.

ನರೇಶ ಅವರು 20 ದಿನಗಳ ಹಿಂದೆ ರಜೆ ಮೇಲೆ ಊರಿಗೆ ಬಂದಿದ್ದರು. ನಿನ್ನೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟ ಅವರು, ಕೆರೆಗೆ ಹಾರಿದ್ದಾರೆ. ಇದನ್ನು ಸ್ಥಳೀಯರೊಬ್ಬರು ಗಮನಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿಗಳಿಂದ ಮೃತದೇಹದ ಹುಡುಕಾಟ (ETV Bharat)

ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೋಳ, ಪ್ರವೀಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿಗಳಿಂದ ಮೃತದೇಹದ ಹುಡುಕಾಟ ನಡೆಯುತ್ತಿದೆ. ನಿನ್ನೆ ಸಂಜೆಯಿಂದಲೂ ಕೆರೆಯಲ್ಲಿ ಶೋಧ ಕಾರ್ಯ ಮಾಡಲಾಗುತ್ತಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವೈವಾಹಿಕ ಜೀವನದಲ್ಲಿ ಏರುಪೇರು ಉಂಟಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ:ಕೋಟಾದಲ್ಲಿ ಜೆಇಇಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ: ಇದು ವರ್ಷದ 16ನೇ ಪ್ರಕರಣ​!

Last Updated : Nov 24, 2024, 1:52 PM IST

ABOUT THE AUTHOR

...view details