ಮಂಗಳೂರು: ಕರ್ಣಾಟಕ ಬ್ಯಾಂಕ್ನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಭಾನುವಾರ ಮಂಗಳೂರಿಗೆ ಆಗಮಿಸಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ವಿಶೇಷ ವಿಮಾನದಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಜೊತೆಗೆ ಪ್ರಯಾಣಿಸಿರುವುದು ಚರ್ಚೆಗೆ ಕಾರಣವಾಗಿದೆ.
ಕರ್ಣಾಟಕ ಬ್ಯಾಂಕ್ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅತಿಥಿಯಾಗಿ ಆಗಮಿಸಿದ್ದರು. ಆದರೆ, ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರ ಹೆಸರು ಆಹ್ವಾನ ಪಟ್ಟಿಯಲ್ಲಿ ಇರಲಿಲ್ಲ. ಆದರೂ ಡಿ.ಕೆ. ಶಿವಕುಮಾರ್ ಅವರು ಆಗಮಿಸಿದ ವಿಶೇಷ ವಿಮಾನದಲ್ಲಿ ಒಟ್ಟಿಗೆ ಬಂದು, ಎಸ್.ಟಿ. ಸೋಮಶೇಖರ್ ಕರ್ಣಾಟಕ ಬ್ಯಾಂಕ್ನ ಕಾರ್ಯಕ್ರಮದಲ್ಲಿ ಸಭಿಕರ ಸಾಲಿನಲ್ಲಿ ಕುಳಿತರು. ಕಾರ್ಯಕ್ರಮ ಮುಗಿದ ಬಳಿಕ ಮತ್ತೆ ಡಿಕೆಶಿ ಜೊತೆಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದರು.