ಕರ್ನಾಟಕ

karnataka

ಗೃಹ ಇಲಾಖೆ ಪರಮೇಶ್ವರ್ ಕೈಯಲ್ಲಿಲ್ಲ, ಬೇರೆ ಯಾರೋ ಹೈಜಾಕ್‌‌ ಮಾಡುತ್ತಿದ್ದಾರೆ: ಆರ್‌.ಅಶೋಕ್ ಆರೋಪ - R AShok Slam Congress

By ETV Bharat Karnataka Team

Published : May 19, 2024, 5:10 PM IST

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ ನಿವಾಸಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಅವರು ಭೇಟಿ ನೀಡಿ ಜನ್ಮದಿನದ ಶುಭಾಶಯ ಕೋರಿದರು.

R Ashoka wished to H D Deve Gowda on his birthday
ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಜನ್ಮದಿನದ ಶುಭಾಶಯ ಕೋರಿದ ಆರ್ ಆಶೋಕ್ (ETV Bharat)

ಬೆಂಗಳೂರು:ಗೃಹ ಇಲಾಖೆಯು ಸಚಿವ ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರನ್ನು ಭೇಟಿಯಾದ ಬಳಿಕ ಪದ್ಮನಾಭನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್​ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ ಎಂದು ಆಪಾದಿಸಿದರು.

ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, ಡಿ ಕೆ ಶಿವಕುಮಾರ್‌ ಅವರ ಧ್ವನಿಮುದ್ರಣ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನು ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್‌ ಅವರಿಗಿದೆ ಎಂದು ತಿಳಿಸಿದರು.

ಒಕ್ಕಲಿಗರನ್ನು ಮುಗಿಸಲು ಯೋಜನೆ:ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ ಎಂದು ಕಿಡಿಕಾರಿದರು.

ಪ್ರಜ್ವಲ್‌ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ:ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ. ಪ್ರಜ್ವಲ್‌ ರೇವಣ್ಣ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವಿಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ. ಹೀಗೆ ಕಾಂಗ್ರೆಸ್‌ ಕಣ್ಣಾ ಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದು ಆರೋಪಿಸಿದರು.

ದೇವೇಗೌಡರ ಭೇಟಿ:ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರನ್ನು ಭೇಟಿಯಾದ ಅಶೋಕ್ ಅವರು ಜನ್ಮದಿನದ ಶುಭಾಶಯ ಕೋರಿದರು. ಇದೇ ವೇಳೆ ರಾಜ್ಯ ರಾಜಕೀಯದ ಕುರಿತಾಗಿ ಚರ್ಚಿಸಿದ್ದು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಗೌಡರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.

ಇದನ್ನೂಓದಿ:ಪೆನ್​​​​ಡ್ರೈವ್ ಪ್ರಕರಣದಲ್ಲಿ ಘಟಾನುಘಟಿಗಳ ಹೆಸರಿರುವ ಕಾರಣ ಸಿಬಿಐ ತನಿಖೆಗೆ ವಹಿಸಬೇಕು: ಬಿ ವೈ ವಿಜಯೇಂದ್ರ - Prajwal Revanna video case

ABOUT THE AUTHOR

...view details