ಕರ್ನಾಟಕ

karnataka

ETV Bharat / state

ಬೆಂಗಳೂರು: ಕೆಲಸಕ್ಕೆ ಹೋಗು ಎಂದಿದ್ದಕ್ಕೆ ತಾಯಿಯನ್ನೇ ಹತ್ಯೆ ಮಾಡಿದ ಮಗ! - MURDER CASE

ಕೆಲಸಕ್ಕೆ ಹೋಗು ಎಂದಿದಕ್ಕೆ ತಾಯಿಯನ್ನೇ ಹತ್ಯೆ ಮಾಡಿದ ಪುತ್ರನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

BENGALURU MAN KILLS MOTHER
ಘಟನಾ ಸ್ಥಳ (ETV Bharat)

By ETV Bharat Karnataka Team

Published : Nov 9, 2024, 7:07 AM IST

ಬೆಂಗಳೂರು: ಕೆಲಸಕ್ಕೆ ಹೋಗು ಅಂದಿದ್ದಕ್ಕೆ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.‌ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಕಂಠೇಶ್ವರ ಬಡಾವಣೆಯಲ್ಲಿ ನಡೆದಿದ್ದು, ಪಾಪಿ ಪುತ್ರನನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಆಯೇಷಾ (50) ಕೊಲೆಯಾದ ಮಹಿಳೆ. ಶುಫಿಯಾನ್ (32) ಬಂಧಿತ ಆರೋಪಿ.

''ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಮೃತ ಮಹಿಳೆ ಪತಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದು, ಆಯೇಷಾ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಮಗ ಶುಫಿಯಾನ್​ ಕೆಲಸಕ್ಕೆ ಹೋಗದೆ ಓಡಾಡುತ್ತಿದ್ದ. ಕೆಲಸಕ್ಕೆ ಹೋಗುವಂತೆ ತಾಯಿ ಬುದ್ಧಿ ಹೇಳಿದರೂ ಆಕೆಯೊಂದಿಗೆ ಜಗಳವಾಡುತ್ತಿದ್ದ. ಶುಕ್ರವಾರ ಬೆಳಗ್ಗೆ ಸಹ ಇದೇ ವಿಚಾರಕ್ಕಾಗಿ ಜಗಳವಾಗಿತ್ತು. ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ಮನೆಯಲ್ಲಿದ್ದ ಚಾಕುವಿನಿಂದ ತಾಯಿಗೆ ಇರಿದು ಹತ್ಯೆ ಮಾಡಿ ಪರಾರಿಗೆ ಯತ್ನಿಸಿದಾಗ ಸ್ಥಳೀಯರೇ ಹಿಡಿದು ತಮಗೆ ಒಪ್ಪಿಸಿರುವುದಾಗಿ'' ಪೊಲೀಸರು ತಿಳಿಸಿದ್ದಾರೆ.

ಹತ್ಯೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ:ಸತ್ತಂತೆ ನಟಿಸಿ ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದ ಯೋಗ ಶಿಕ್ಷಕಿ ಪ್ರಕರಣ: ಮಹಿಳೆ ಸೇರಿ 6 ಆರೋಪಿಗಳ ಬಂಧನ

ABOUT THE AUTHOR

...view details