ಬೆಂಗಳೂರು:ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಎಐಸಿಸಿ ಆದೇಶ ಹೊರಡಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ ಚಂಡೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಮಾಡಲಾಗಿದೆ. ಪುಷ್ಪಾ ಅಮರನಾಥ್ ಹಾಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದರು. ಇದೀಗ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಜಯನಗರ ಮಾಜಿ ಶಾಸಕಿ ಸೌಮ್ಯ ರೆಡ್ಡಿ 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಸಚಿವ ರಾಮಲಿಂಗ ರೆಡ್ಡಿ ಪುತ್ರಿಯಾಗಿರುವ ಸೌಮ್ಯ ರೆಡ್ಡಿಗೆ ಇದೀಗ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಒಲಿದಿದೆ.