ಕರ್ನಾಟಕ

karnataka

ETV Bharat / state

ಮತ್ತೆ ಪರಪ್ಪನ ಅಗ್ರಹಾರದ ಮೇಲೆ ಪೊಲೀಸರ ದಾಳಿ: ಜೈಲಿನ ಸಿಬ್ಬಂದಿ, ಕೈದಿಗಳ ವಿರುದ್ಧ ಪ್ರಕರಣ - South East police raid Central Jail - SOUTH EAST POLICE RAID CENTRAL JAIL

ದರ್ಶನ್ ಪ್ರಕರಣದ ಬಳಿಕ ಮತ್ತೊಮ್ಮೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ಆಗ್ನೇಯ ವಿಭಾಗದ ಪೊಲೀಸರ ತಂಡ ದಾಳಿ ನಡೆಸಿದೆ. ಈ ವೇಳೆ ಹಲವು ಮೊಬೈಲ್​ ಸೇರಿ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಪೊಲೀಸ್​ ಮೂಲಗಳಿಂದ ತಿಳಿದು ಬಂದಿದೆ.

south-east-police-raid-on-central-jail-case-against-staff-inmates-of-parappana-agrahara-jail
ಮತ್ತೆ ಪರಪ್ಪನ ಅಗ್ರಹಾರದ ಮೇಲೆ ಪೊಲೀಸರ ದಾಳಿ: ಜೈಲಿನ ಸಿಬ್ಬಂದಿ, ಕೈದಿಗಳ ವಿರುದ್ಧ ಪ್ರಕರಣ (ETV Bharat)

By ETV Bharat Karnataka Team

Published : Sep 16, 2024, 9:13 PM IST

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್​​ಗೆ ರಾಜಾತಿಥ್ಯ ನೀಡಿದ ಆರೋಪದ ಮೇಲೆ ಸುದ್ದಿಯಾಗಿದ್ದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಶನಿವಾರ ಆಗ್ನೇಯ ವಿಭಾಗದ ಪೊಲೀಸರ ತಂಡ ಮತ್ತೆ ದಾಳಿ ನಡೆಸಿದೆ. ಈ ದಾಳಿ ವೇಳೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಮೊಬೈಲ್ ಫೋನ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಶನಿವಾರ ಏಕಾಏಕಿ ದಾಳಿ ಮಾಡಿದ್ದ ಪೊಲೀಸರಿಗೆ ತಪಾಸಣೆ ವೇಳೆ ವಿಲ್ಸನ್‌ ಗಾರ್ಡನ್‌ ನಾಗ ಮತ್ತು ಆತನ ಸಹಚರರ ಸುಮಾರು 18 ಮೊಬೈಲ್‌ ಫೋನ್‌ಗಳು, ಸಿಗರೇಟ್, ಚಾಕು ಮತ್ತಿತರ ವಸ್ತುಗಳು ಲಭ್ಯವಾಗಿವೆ ಎಂಬ ಮಾಹಿತಿ ಪೊಲೀಸ್​ ಮೂಲಗಳಿಂದ ತಿಳಿದು ಬಂದಿದೆ.

ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ನಿರ್ದೇಶನದಲ್ಲಿ ಒಬ್ಬ ಎಸಿಪಿ, ಇಬ್ಬರು ಇನ್ಸ್​​​​​​ಪೆಕ್ಟರ್‌ಗಳು, ಪಿಎಸ್ಐ ಹಾಗೂ ಸಿಬ್ಬಂದಿ ಸೇರಿದಂತೆ 30 ಜನರ ತಂಡ ಜೈಲಿನಲ್ಲಿ ಶೋಧ ನಡೆಸಿತ್ತು. ಕರ್ತವ್ಯಲೋಪದ ಆರೋಪದಡಿ ಜೈಲು ಅಧಿಕಾರಿಗಳು, ಕಾರಾಗೃಹದ ಭದ್ರತಾ ಉಸ್ತುವಾರಿ ಹೊಂದಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ, ವಿಚಾರಣಾಧೀನ ಕೈದಿಗಳು ಮತ್ತು ಸಜಾ ಕೈದಿಗಳ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿದ್ದಾರೆ.

ಇದನ್ನು ಓದಿ:ಬೆಂಗಳೂರು: ಪೊಲೀಸರಿಗೆ ಮಾಹಿತಿ ನೀಡಿದ ವ್ಯಕ್ತಿಗೆ ಹಲ್ಲೆ ನಡೆಸಿದ ರೌಡಿಶೀಟರ್ - Rowdy Sheeter Attack

ABOUT THE AUTHOR

...view details