ಹುಬ್ಬಳ್ಳಿ:ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಚೆನ್ನೈ ಎಗ್ಮೋರ್ ನಿಲ್ದಾಣಗಳ ನಡುವೆ ಎರಡು ಟ್ರಿಪ್ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ 06209 ಅಕ್ಟೋಬರ್ 30 ಮತ್ತು ನವೆಂಬರ್ 3, 2024ರಂದು ಬೆಳಿಗ್ಗೆ 8:05ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 2:30 ಕ್ಕೆ ಚೆನ್ನೈ ಎಗ್ಮೋರ್ ನಿಲ್ದಾಣವನ್ನು ತಲುಪಲಿದೆ. ರೈಲು ಸಂಖ್ಯೆ 06210 ಚೆನ್ನೈ ಎಗ್ಮೋರ್ ನಿಲ್ದಾಣದಿಂದ ಅಕ್ಟೋಬರ್ 30 ಮತ್ತು ನವೆಂಬರ್ 3, 2024ರಂದು ಮಧ್ಯಾಹ್ನ 3:55ಕ್ಕೆ ಹೊರಟು, ಅದೇ ದಿನ ರಾತ್ರಿ 10:50ಕ್ಕೆ ಕೆಎಸ್ಆರ್ ಬೆಂಗಳೂರು ಆಗಮಿಸಲಿದೆ.
ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟ್ಪಾಡಿ, ಅರಕ್ಕೋಣಂ ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ಈ ಎರಡೂ ರೈಲುಗಳಲ್ಲಿ ನಿಲುಗಡೆ ಇದೆ.
ಈ ರೈಲು 1 ಎಸಿ ಟು ಟೈಯರ್, 1 ಎಸಿ ತ್ರಿ ಟೈಯರ್, 11 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ಬ್ರೇಕ್ ವ್ಯಾನ್ ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿದೆ.
ಹುಬ್ಬಳ್ಳಿ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ರೈಲು ಸೇವೆ:ರೈಲು ಸಂಖ್ಯೆ 07311 ನವೆಂಬರ್ 2, 2024ರಂದು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು, ಮರುದಿನ ದಿನ ಬೆಳಗ್ಗೆ 11.25 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ.