ಕರ್ನಾಟಕ

karnataka

ETV Bharat / state

ವನ್ಯಜೀವಿ ವಿಭಾಗದ ಮುಂಚೂಣಿ ಸಿಬ್ಬಂದಿಗೆ ಖುಷಿ ಸುದ್ದಿ; ವಿಶೇಷ ಭತ್ಯೆ ಮಂಜೂರು - Special Allowance For Forest Staff - SPECIAL ALLOWANCE FOR FOREST STAFF

ವನ್ಯಜೀವಿ ವಿಭಾಗಗಳ ಮುಂಚೂಣಿ ಸಿಬ್ಬಂದಿಗೆ ರಾಜ್ಯ ಸರ್ಕಾರದಿಂದ ಕಠಿಣ ಕೆಲಸದ ಭತ್ಯೆ ಮಂಜೂರು ಮಾಡಲಾಗಿದೆ.

forest department
ಸಚಿವ ಈಶ್ವರ ಬಿ. ಖಂಡ್ರೆ (ETV Bharat/IANS)

By ETV Bharat Karnataka Team

Published : Jul 27, 2024, 8:00 PM IST

ಬೆಂಗಳೂರು: ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್) ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹುದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ವಲಯ ಅರಣ್ಯಾಧಿಕಾರಿ ಮತ್ತು ಉಪವಲಯ ಅರಣ್ಯಾಧಿಕಾರಿಗಳಿಗೆ ತಲಾ 3,500 ರೂ., ಅರಣ್ಯ ರಕ್ಷಕರಿಗೆ 2,700 ರೂ. ಹಾಗೂ ಡಿ ದರ್ಜೆ ನೌಕರರಿಗೆ ಮಾಸಿಕವಾಗಿ 2,000 ರೂ.ಗಳನ್ನು ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಇದರ ನಿಗ್ರಹಕ್ಕಾಗಿ ಆನೆ ಕಾರ್ಯಪಡೆ ರಚಿಸಲಾಗಿದೆ. ಇದರಲ್ಲಿ ಕಾರ್ಯ ನಿರ್ವಹಿಸುವ ಹೊರಗುತ್ತಿಗೆ ಸಿಬ್ಬಂದಿಯೂ ಸೇರಿದಂತೆ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾಸಿಕ ಕರ್ತವ್ಯ ನಿರ್ವಹಿಸಿದ 6 ದಿನಗಳಿಗೆ 500 ರೂ. ಆಧಾರದಲ್ಲಿ ತಿಂಗಳಿಗೆ ಗರಿಷ್ಠ 2,000 ರೂ. (ಷರತ್ತಿಗೆ ಒಳಪಟ್ಟು) ನೀಡಲು ಆದೇಶ ಹೊರಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ನಂಜನಗೂಡು, ಹೆಚ್.ಡಿ. ಕೋಟೆ, ಸರಗೂರು, ಟಿ. ನರಸೀಪುರ, ಮಂಡ್ಯ, ಪಾಂಡವಪುರ, ನಾಗಮಂಗಲ ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಿರತೆ ಕಾರ್ಯಪಡೆ, ವನ್ಯ ಜೀವಿಗಳನ್ನು ಹಿಮ್ಮೆಟ್ಟಿಸುವ ಕ್ಷಿಪ್ರ ಸ್ಪಂದನಾ ಪಡೆ ಸಿಬ್ಬಂದಿ ಮತ್ತು ಅರಣ್ಯದೊಳಗಿರುವ ಕಳ್ಳಬೇಟೆ ಶಿಬಿರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರಿಗೂ ಇದು ಅನ್ವಯಿಸುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತಾವು ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿ ಮತ್ತು ಹೊರಗುತ್ತಿಗೆ ನೌಕರರು ಚಳಿ, ಮಳೆ, ಗಾಳಿ ಎನ್ನದೆ, ವನ್ಯಜೀವಿಗಳ ದಾಳಿಯ ಅಪಾಯದ ನಡುವೆಯೂ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವುದನ್ನು ಗಮನಿಸಿ, ಈ ವಿಶೇಷ ಭತ್ಯೆ ನೀಡಲು ತೀರ್ಮಾನಿಸಿದ್ದಾಗಿ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣದ ಅವ್ಯವಹಾರ ನಡೆದಿರುವುದು ಸತ್ಯ: ಸಚಿವ ರಾಜಣ್ಣ - Valmiki Corporation Case

ABOUT THE AUTHOR

...view details