ಹುಬ್ಬಳ್ಳಿ:ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 300 ಹೆಚ್ಚುವರಿ ವಿಶೇಷ ಬಸ್ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಅಕ್ಟೋಬರ್ 31ರಂದು ಗುರುವಾರ ನರಕ ಚತುರ್ದಶಿ, ನ.01ರಂದು ಕನ್ನಡ ರಾಜ್ಯೋತ್ಸವ, ನ.02ರಂದು ಬಲಿಪಾಡ್ಯಮಿ ಹಾಗೂ ನ.03ರಂದು ಭಾನುವಾರ ಇರುವುದರಿಂದ ಬೆಂಗಳೂರು ಮತ್ತು ಇತರ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲಿದ್ದಾರೆ. ಹೀಗಾಗಿ, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ದೀಪಾವಳಿವರೆಗೆ ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ