ಕರ್ನಾಟಕ

karnataka

ETV Bharat / state

ಬೆಂಗಳೂರು: 800 ಚಾಲಕರ ವಿರುದ್ಧ ಡ್ರಿಂಕ್ & ಡ್ರೈವ್, ಅತಿವೇಗದ ಚಾಲನೆಗೆ 2.30 ಲಕ್ಷ ರೂ. ದಂಡ - BENGALURU TRAFFIC POLICE

ಬೆಂಗಳೂರು ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ, 800 ಚಾಲಕರ ವಿರುದ್ಧ ಡ್ರಿಂಕ್ ಅಂಡ್​ ಡ್ರೈವ್ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಅತಿವೇಗದ ಚಾಲನೆ ಮಾಡಿದ ಚಾಲಕರಿಗೆ 2.30 ಲಕ್ಷ ರೂ ದಂಡ ಹಾಕಲಾಗಿದೆ.

ಬೆಂಗಳೂರು ಸಂಚಾರ ಪೊಲೀಸರ ವಿಶೇಷ ಕಾರ್ಯಾಚರಣೆ, Drunk and drive, Overspeed
ಬೆಂಗಳೂರು ಸಂಚಾರ ಪೊಲೀಸರ ವಿಶೇಷ ಕಾರ್ಯಾಚರಣೆ (ಸಂಗ್ರಹ ಚಿತ್ರ ETV Bharat)

By ETV Bharat Karnataka Team

Published : Feb 3, 2025, 10:01 AM IST

ಬೆಂಗಳೂರು:ನಗರದಲ್ಲಿ ಪಾನಮತ್ತ ಹಾಗೂ ಅತಿವೇಗದ ವಾಹನ ಚಾಲನೆಗೆ ಬ್ರೇಕ್ ಹಾಕಲು ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಕಳೆದ ಒಂದು ವಾರದಲ್ಲಿ ಬರೋಬ್ಬರಿ 1 ಸಾವಿರಕ್ಕೂ ಅಧಿಕ ಪ್ರಕರಣಗಳನ್ನ ದಾಖಲಿಸಿ, 2.30 ಲಕ್ಷ ರೂ ದಂಡ ವಿಧಿಸಿದ್ದಾರೆ.

50 ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ:ಜನವರಿ 27ರಿಂದ‌ ಫೆ.2ರವರೆಗೆ ನಗರದ 50 ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ವೇಳೆ 62,300 ವಾಹನಗಳನ್ನು ಪರಿಶೀಲಿಸಿ, ಆ ಪೈಕಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ 800 ವಾಹನಗಳ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅದೇ ರೀತಿ‌ ಅತಿವೇಗದ ಚಾಲನೆ ಮಾಡಿದ ನಿಯಮ ಉಲ್ಲಂಘಿಸಿದ 228 ವಾಹನಗಳ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 2,30,000 ರೂ ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.

ವಿಶೇಷ ಕಾರ್ಯಾಚರಣೆ ಮುಂದುವರಿಕೆ:ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ಮತ್ತು ಅತಿವೇಗದಲ್ಲಿ ವಾಹನ ಚಲಾಯಿಸುವ ಚಾಲಕರ ಹಾವಳಿ ತಡೆಗಟ್ಟಲು ಮತ್ತು ರಸ್ತೆ ಸುರಕ್ಷತೆಗಾಗಿ ವಿಶೇಷ ಕಾರ್ಯಾಚರಣೆಗಳನ್ನು ಮುಂದೆಯೂ ಹಮ್ಮಿಕೊಳ್ಳುವುದಾಗಿ ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ABOUT THE AUTHOR

...view details