ಹುಬ್ಬಳ್ಳಿ:ಪ್ರಯಾಗರಾಜ್ ಮಹಾಕುಂಭಮೇಳದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಮೈಸೂರು ಮತ್ತು ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ರೈಲು ಸಂಖ್ಯೆ 06219 ಮೈಸೂರು-ತುಂಡ್ಲಾ ವಿಶೇಷ ಎಕ್ಸ್ಪ್ರೆಸ್ ರೈಲು ಫೆ.20ರಂದು (ಗುರುವಾರ) ಮೈಸೂರಿನಿಂದ ರಾತ್ರಿ 9:40 ಗಂಟೆಗೆ ಹೊರಟು, ಫೆಬ್ರವರಿ 23ರಂದು (ಭಾನುವಾರ) ಬೆಳಗ್ಗೆ 9:30 ಗಂಟೆಗೆ ತುಂಡ್ಲಾ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06220) ಫೆ.24ರಂದು (ಸೋಮವಾರ) ತುಂಡ್ಲಾ ನಿಲ್ದಾಣದಿಂದ ಬೆಳಗ್ಗೆ 11:30 ಗಂಟೆಗೆ ಹೊರಟು, ಬುಧವಾರ (ಫೆ.26) ರಾತ್ರಿ 10 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.
ಎಲ್ಲೆಲ್ಲಿ ನಿಲುಗಡೆ ?ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ರಾಮನಗರ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ, ಕುಡಚಿ, ಮೀರಜ್, ಪುಣೆ, ದೌಂಡ್ ಕಾರ್ಡ್ ಲೈನ್, ಮನ್ಮಾಡ್, ಭೂಸಾವಲ್, ಇಟಾರ್ಸಿ, ಪಿಪಾರಿಯಾ, ನರಸಿಂಗ್ಪುರ, ಜಬಲ್ಪುರ್, ಕಟ್ನಿ, ಮೈಹಾರ್, ಸತ್ನಾ, ಮಾಣಿಕ್ಪುರ್, ಪ್ರಯಾಗರಾಜ್, ಫತೇಪುರ್, ಗೋವಿಂದಪುರಿ, ಇಟಾವಾ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಈ ವಿಶೇಷ ಎಕ್ಸ್ಪ್ರೆಸ್ ರೈಲಿನಲ್ಲಿ 03 ಎಸಿ ಟು ಟೈರ್, 03 ಎಸಿ ತ್ರಿ ಟೈರ್, 08 ಜನರಲ್ ಸ್ಲೀಪರ್, 02 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು ಸೇರಿದಂತೆ 18 ಬೋಗಿಗಳು ಇರಲಿವೆ. ಈ ರೈಲುಗಳ ಪ್ರತಿ ನಿಲ್ದಾಣದ ವೇಳಾಪಟ್ಟಿ ಮತ್ತು ಟಿಕೆಟ್ ಬುಕಿಂಗ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ಅಧಿಕೃತ ಭಾರತೀಯ ರೈಲ್ವೆ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆ 139ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಮಹಾ ಕುಂಭಮೇಳಕ್ಕೆ ತೆರಳಲು ಮೈಸೂರಿನಿಂದ ಲಕ್ನೋ, ತುಂಡ್ಲಾಕ್ಕೆ ವಿಶೇಷ ಎಕ್ಸ್ಪ್ರೆಸ್ ರೈಲು