ಕರ್ನಾಟಕ

karnataka

ETV Bharat / state

ಮಹಾ​ ಕುಂಭಮೇಳಕ್ಕೆ ತೆರಳಲು ಮೈಸೂರಿನಿಂದ ಲಕ್ನೋ, ತುಂಡ್ಲಾಕ್ಕೆ ವಿಶೇಷ ಎಕ್ಸ್​ಪ್ರೆಸ್​ ರೈಲು - SPECIAL EXPRESS TRAIN FOR MAHAKUMBH

ಮಹಾ ​ಕುಂಭಮೇಳ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ಮೈಸೂರಿನಿಂದ ಲಕ್ನೋ ಹಾಗೂ ತುಂಡ್ಲಾ ನಡುವೆ ವಿಶೇಷ ರೈಲುಗಳ ವ್ಯವಸ್ಥೆ ಕಲ್ಪಿಸಲಾಗಿದೆ.

SPECIAL EXPRESS TRAIN FOR MAHAKUMBH
ಮಹಾ​ ಕುಂಭಮೇಳ (ETV Bharat)

By ETV Bharat Karnataka Team

Published : Feb 12, 2025, 6:51 PM IST

ಹುಬ್ಬಳ್ಳಿ:ಪ್ರಯಾಗ​ರಾಜ್ ಮಹಾ ಕುಂಭಮೇಳಕ್ಕೆ ತೆರಳುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರಿನಿಂದ ಲಕ್ನೋಗೆ ಏಕಮಾರ್ಗ ವಿಶೇಷ ಎಕ್ಸ್​ಪ್ರೆಸ್ ರೈಲು (06221) ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ಮೈಸೂರು-ಲಕ್ನೋ ಏಕಮಾರ್ಗ ವಿಶೇಷ ರೈಲು (06221) ಶುಕ್ರವಾರ (ಫೆ.14) ಬೆಳಗ್ಗೆ 7:30 ಗಂಟೆಗೆ ಮೈಸೂರಿನಿಂದ ಹೊರಟು, ಭಾನುವಾರ (ಫೆ.16) ಸಂಜೆ 4:00 ಗಂಟೆಗೆ ಲಕ್ನೋ ನಿಲ್ದಾಣ ತಲುಪಲಿದೆ.

ಈ ರೈಲಿನಲ್ಲಿ 1 ಎಸಿ ತ್ರಿ ಟೈರ್, 8 ಸ್ಲೀಪರ್ ಕ್ಲಾಸ್, 10 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ. ಈ ರೈಲು ಮಂಡ್ಯ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ, ಕುಡಚಿ, ಮೀರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಕಾರ್ಡ್ ಲೈನ್, ಮನ್ಮಾಡ್, ಭೂಸಾವಲ್, ಇಟಾರ್ಸಿ, ಕಟ್ನಿ, ಸತ್ನಾ, ಮಾಣಿಕ್ಪುರ್, ಪ್ರಯಾಗರಾಜ್ ಚಿಯೋಕಿ ಮತ್ತು ವಾರಾಣಸಿ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಮೈಸೂರು-ತುಂಡ್ಲಾ ವಿಶೇಷ ಎಕ್ಸ್​​ಪ್ರೆಸ್ ರೈಲು:ಜೊತೆಗೆ, ಮೈಸೂರು ಮತ್ತು ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲು ಸಂಖ್ಯೆ 06217 ಮೈಸೂರು-ತುಂಡ್ಲಾ ವಿಶೇಷ ಎಕ್ಸ್​​ಪ್ರೆಸ್ ರೈಲು ಫೆ.17ರಂದು (ಸೋಮವಾರ) ಮೈಸೂರಿನಿಂದ ರಾತ್ರಿ 9:40 ಗಂಟೆಗೆ ಹೊರಟು, ಫೆಬ್ರವರಿ 20ರಂದು (ಗುರುವಾರ) ಬೆಳಗ್ಗೆ 9:30 ಗಂಟೆಗೆ ತುಂಡ್ಲಾ ನಿಲ್ದಾಣ ತಲುಪಲಿದೆ.

ಪುನಃ ಇದೇ ರೈಲು (06218) ಫೆ. 21ರಂದು (ಶುಕ್ರವಾರ) ತುಂಡ್ಲಾ ನಿಲ್ದಾಣದಿಂದ ಬೆಳಗ್ಗೆ 11:30 ಗಂಟೆಗೆ ಹೊರಟು, ಭಾನುವಾರ (ಫೆ.23) ರಾತ್ರಿ 10 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.

ಇದನ್ನೂ ಓದಿ:ಆರ್ಥಿಕ ಅಭಿವೃದ್ಧಿಗೆ ಸಾಕ್ಷ್ಯಿಯಾದ ಮಹಾ ಕುಂಭಮೇಳ: ಹಲವು ಉದ್ಯೋಗಗಳ ಸೃಷ್ಟಿ- ಹೀಗೆ ಹೇಳುತ್ತಿವೆ ಅಂಕಿ - ಅಂಶಗಳು!

ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ರಾಮನಗರಂ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ,ರಾಯಬಾಗ, ಕುಡಚಿ, ಮೀರಜ್, ಪುಣೆ, ದೌಂಡ್ ಕಾರ್ಡ್ ಲೈನ್, ಮನ್ಮಾಡ್, ಭೂಸಾವಲ್, ಇಟಾರ್ಸಿ, ಪಿಪಾರಿಯಾ, ನರಸಿಂಗ್ಪುರ, ಜಬಲ್ಪುರ್, ಕಟ್ನಿ, ಮೈಹಾರ್, ಸತ್ನಾ, ಮಾಣಿಕ್ಪುರ್, ಪ್ರಯಾಗರಾಜ್, ಫತೇಪುರ್, ಗೋವಿಂದಪುರಿ, ಇಟಾವಾ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಈ ವಿಶೇಷ ಎಕ್ಸ್​ಪ್ರೆಸ್ ರೈಲಿನಲ್ಲಿ 3 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು ಸೇರಿದಂತೆ 17 ಬೋಗಿಗಳು ಇರಲಿವೆ.

''ರೈಲುಗಳ ಪ್ರತಿ ನಿಲ್ದಾಣದ ವೇಳಾಪಟ್ಟಿ ಮತ್ತು ಟಿಕೆಟ್ ಬುಕಿಂಗ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ಅಧಿಕೃತ ಭಾರತೀಯ ರೈಲ್ವೆ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆ 139ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು'' ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ್ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಮಹಾಕುಂಭಮೇಳ: ಮಾಘ ಪೂರ್ಣಿಮೆ ಹಿನ್ನೆಲೆ ಭಕ್ತರಿಂದ ಪವಿತ್ರ ಸ್ನಾನ; UP ಸರ್ಕಾರದಿಂದ ಕಟ್ಟೆಚ್ಚರ

ABOUT THE AUTHOR

...view details