ಚಾಮರಾಜನಗರ:ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳು ಈ ಬಾರಿ ಅಯೋಧ್ಯೆ ರಾಮನ ಅವತಾರದ ಗಣಪತಿಯನ್ನು ಪ್ರತಿಷ್ಠಾಪಿಸಿದ್ದಾರೆ. ಇದಕ್ಕೂ ಮುನ್ನ ಮಂಗಳವಾದ್ಯದಲ್ಲಿ ಗಣೇಶಮೂರ್ತಿಯನ್ನು ಮೆರವಣಿಗೆಯಲ್ಲಿ ತರಲಾಯಿತು. ಹೆಚ್ಚು ಪೊಲೀಸ್ ಬಂದೋಬಸ್ತ್ ಇರುವುದರಿಂದ ಇದು ಪೊಲೀಸ್ ಗಣಪತಿ ಅಂಥಲೂ, ದೊಡ್ಡ ಗಣಪತಿ, ಆರ್‌ಎಸ್ಎಸ್ ಗಣಪತಿ ಅಂಥಲೂ ಈ ಗಣೇಶ ಜನಪ್ರಿಯತೆ ಗಳಿಸಿದೆ.
ಇನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಪ್ರತಿಷ್ಠಾಪನೆ ವೇಳೆ ಹಾಜರಿದ್ದು, ಪೂಜೆಯಲ್ಲಿ ಪಾಲ್ಗೊಂಡು ಮೊದಲ ಪೂಜೆ ಮಾಡಿ ಗಮನ ಸೆಳೆದರು. ಈ ಬಾರಿಯೂ ಕೂಡ ಹಿಂದೂಪರ ಮುಖಂಡರು 27 ದಿನಗಳ ಕಾಲ ಪೂಜೆ, 7 ದಿನ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಲು ತಯಾರಿ ಮಾಡಿಕೊಂಡಿದ್ದಾರೆ. ಕಳೆದ 62 ವರ್ಷಗಳಿಂದ ವಿಜೃಂಭಣೆಯಿಂದ, ಸೌಹಾರ್ದತೆಯಿಂದ ಗಣೇಶ ಹಬ್ಬ ನಡೆದುಕೊಂಡು ಬಂದಿದ್ದು, ಈ ಬಾರಿಯೂ ಕೂಡ ಅದ್ಧೂರಿಯಾಗಿ ಮತ್ತು ಸೌಹಾರ್ದತೆಯಿಂದ ಕೂಡಿರಲಿ ಎಂದು ಡಿಸಿ ಶಿಲ್ಪಾನಾಗ್ ಹೇಳಿದರು.