ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲು: ಕುಂಭಮೇಳಕ್ಕಾಗಿ ಮೈಸೂರಿನಿಂದಲೂ ಟ್ರೇನ್ - SPECIAL TRAIN SERVICE

ಎಸ್​ಎಸ್​ಎಸ್​ ಹುಬ್ಬಳ್ಳಿ-ಕನ್ಯಾಕುಮಾರಿ ನಿಲ್ದಾಣಗಳ ನಡುವೆ ಪ್ರತೀ ದಿಕ್ಕಿನಲ್ಲಿ ನೈರುತ್ಯ ರೈಲ್ವೆ ಮೂರು ಟ್ರಿಪ್​ ವಿಶೇಷ ರೈಲುಗಳನ್ನು ಓಡಿಸಲಿದೆ.

special-train
ರೈಲು ನಿಲ್ದಾಣ (ಸಂಗ್ರಹ ಚಿತ್ರ ETV Bharat)

By ETV Bharat Karnataka Team

Published : Dec 27, 2024, 6:17 PM IST

ಹುಬ್ಬಳ್ಳಿ:ಕ್ರಿಸ್ಮಸ್ ಹಬ್ಬದ ನಂತರ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಪೂರೈಸಲು ನೈಋತ್ಯ ರೈಲ್ವೆ, ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ನಿಲ್ದಾಣಗಳ ನಡುವೆ ಪ್ರತೀ ದಿಕ್ಕಿನಲ್ಲಿ 3 ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ.

  • ರೈಲು ಸಂಖ್ಯೆ 07367/07368 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್​ಪ್ರೆಸ್​ ವಿಶೇಷ (3 ಟ್ರಿಪ್​​ಗಳು)
  • ರೈಲು ಸಂಖ್ಯೆ 07367 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ಎಕ್ಸ್​ಪ್ರೆಸ್​ ವಿಶೇಷ ರೈಲು ಡಿಸೆಂಬರ್ 30, ಜನವರಿ 6 ಮತ್ತು 13, 2025ರಂದು ಸಂಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಮಧ್ಯಾಹ್ನ 3:20ಕ್ಕೆ ಕನ್ಯಾಕುಮಾರಿ ತಲುಪಲಿದೆ.
  • ರೈಲು ಸಂಖ್ಯೆ 07368 ಕನ್ಯಾಕುಮಾರಿ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್​ಪ್ರೆಸ್ ವಿಶೇಷ ರೈಲು ಡಿಸೆಂಬರ್ 31, 2024 ಮತ್ತು ಜನವರಿ 7 ಮತ್ತು 14, 2025ರಂದು ಸಂಜೆ 7:10ಕ್ಕೆ ಕನ್ಯಾಕುಮಾರಿಯಿಂದ ಹೊರಟು ಮರುದಿನ ಸಂಜೆ 7:35ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?: ಎರಡೂ ಮಾರ್ಗಗಳಲ್ಲಿ ಈ ರೈಲು ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು ಜಂಕ್ಷನ್, ಅರಸೀಕೆರೆ ಜಂಕ್ಷನ್, ತುಮಕೂರು, ಯಶವಂತಪುರ ಜಂಕ್ಷನ್, ಕೃಷ್ಣರಾಜಪುರ, ಬಂಗಾರಪೇಟೆ, ಸೇಲಂ ಜಂಕ್ಷನ್, ನಾಮಕ್ಕಲ್, ಕರೂರ್, ದಿಂಡಿಗಲ್ ಜಂಕ್ಷನ್, ಮಧುರೈ ಜಂಕ್ಷನ್, ವಿರುದುನಗರ ಜಂಕ್ಷನ್, ಸತೂರ್, ಕೋವಿಲ್ಪಟ್ಟಿ, ತಿರುನೆಲ್ವೇಲಿ ಜಂಕ್ಷನ್, ವಲ್ಲಿಯೂರ್ ಮತ್ತು ನಾಗರಕೋಯಿಲ್ ಜಂಕ್ಷನ್ ನಿಲ್ದಾಣಗಳಲ್ಲಿ ನಿಲ್ಲಲಿದೆ.

"ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯ ತಿಳಿಯಲು, ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್​​ಸೈಟ್​ಗೆ (www.enquiry.indianrail.gov.in) ಭೇಟಿ ನೀಡಿ ಅಥವಾ 139 ನಂಬರ್​ಗೆ ಡಯಲ್ ಮಾಡಿ ಅಥವಾ NTES ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಮಾಹಿತಿ ಪಡೆದುಕೊಳ್ಳಬಹುದು" ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರಯಾಣಿಕರೇ ಗಮನಿಸಿ: ಕ್ರಿಸ್ಮಸ್, ಹೊಸ ವರ್ಷದ ಹಿನ್ನೆಲೆ ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ - SPECIAL TRAIN SERVICE

ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋ ಜಂಕ್ಷನ್​ಗೆ ವಿಶೇಷ ರೈಲು:ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಏಕಮುಖ ವಿಶೇಷ ರೈಲನ್ನು ಓಡಿಸಲಿದೆ.
ರೈಲು ಸಂಖ್ಯೆ 06216: ಮೈಸೂರು-ಲಕ್ನೋ ಜಂಕ್ಷನ್ ಏಕ ಮುಖ ಸ್ಪೆಷಲ್ ಎಕ್ಸ್​ಪ್ರೆಸ್ ಡಿಸೆಂಬರ್ 29, 2024 ರ ಭಾನುವಾರ 00:30 ಗಂಟೆಗೆ ಮೈಸೂರಿನಿಂದ ಹೊರಟು ಡಿಸೆಂಬರ್ 31, 2024 ರ ಮಂಗಳವಾರ 04:00 ಗಂಟೆಗೆ ಲಕ್ನೋ ಜಂಕ್ಷನ್ ತಲುಪಲಿದೆ.

ಈ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ ಜಂಕ್ಷನ್, ತುಮಕೂರು, ಅರಸೀಕೆರೆ ಜಂಕ್ಷನ್, ಕಡೂರು, ಚಿಕ್ಕಜಾಜೂರು ಜಂಕ್ಷನ್, ದಾವಣಗೆರೆ, ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ ಜಂಕ್ಷನ್, ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್ ಜಂಕ್ಷನ್, ಸಾಂಗ್ಲಿ, ಕರಡ್, ಪುಣೆ ಜಂಕ್ಷನ್, ದೌಂಡ್ ಕಾರ್ಡ್ ಲೈನ್, ಅಹ್ಮದ್ನಗರ, ಮನ್ಮಾಡ್ ಜಂಕ್ಷನ್, ಭೂಸಾವಲ್ ಜಂಕ್ಷನ್, ಖಾಂಡ್ವಾ, ತಲ್ವಾಡಿಯಾ, ಭೋಪಾಲ್, ಖಾಂಡ್ವಾ, ತಲ್ವಾಡಿಯಾ, ಚನೇರಾ, ಖಾಂಡ್ವಾ, ತಲ್ವಾಡ್ಯ, ಚನೇರಾ, ಖಾಂಡ್ವಾ ನಿಲ್ದಾಣಗಳಲ್ಲಿ ನಿಲ್ಲಲಿದೆ. ಈ ರೈಲು 11 ಸೆಕೆಂಡ್ ಜನರಲ್ ಕ್ಲಾಸ್ ಬೋಗಿಗಳು, 07 ಸ್ಲೀಪರ್ ಕ್ಲಾಸ್ ಬೋಗಿಗಳು ಮತ್ತು 2 ಎಸ್ಎಲ್ಆರ್ / ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.

"ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯ ತಿಳಿಯಲು, ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್​​ಸೈಟ್​ಗೆ (www.enquiry.indianrail.gov.in) ಭೇಟಿ ನೀಡಿ ಅಥವಾ 139 ನಂಬರ್​ಗೆ ಡಯಲ್ ಮಾಡಿ ಅಥವಾ NTES ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಮಾಹಿತಿ ಪಡೆದುಕೊಳ್ಳಬಹುದು" ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕುಂಭಮೇಳ: ಪ್ರಯಾಗ್​ ರಾಜ್​​ಗೆ ಹುಬ್ಬಳ್ಳಿ, ಮೈಸೂರಿನಿಂದ ವಿಶೇಷ ರೈಲು - ಇಲ್ಲಿದೆ ವೇಳಾಪಟ್ಟಿ

ABOUT THE AUTHOR

...view details