ಕರ್ನಾಟಕ

karnataka

ETV Bharat / state

ಶಬರಿಮಲೆಗೆ ತೆರಳಲು ಹುಬ್ಬಳ್ಳಿ - ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ - SABARIMALA SPECIAL TRAIN

ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಹುಬ್ಬಳ್ಳಿ - ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ ಇರಲಿದೆ.

sabarimala train
ಹುಬ್ಬಳ್ಳಿ ರೈಲು ನಿಲ್ದಾಣ, ಶಬರಿಮಲೆ (ETV Bharat And IANS)

By ETV Bharat Karnataka Team

Published : Nov 11, 2024, 10:32 PM IST

ಹುಬ್ಬಳ್ಳಿ:ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆ ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ - ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ 9 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸಲಿದೆ.

ರೈಲು ಸಂಖ್ಯೆ 07371/07372 ಎಸ್ಎಸ್ಎಸ್ ಹುಬ್ಬಳ್ಳಿ - ಕೊಟ್ಟಾಯಂ- ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್​ಪ್ರೆಸ್ ರೈಲು 9 ಟ್ರಿಪ್ ಸಂಚರಿಸಲಿದೆ. ರೈಲು ಸಂಖ್ಯೆ 07371 ಹುಬ್ಬಳ್ಳಿ ನಿಲ್ದಾಣದಿಂದ ನವೆಂಬರ್ 19ರಿಂದ 2025ರ ಜನವರಿ 14ರ ವರೆಗೆ ಪ್ರತಿ ಮಂಗಳವಾರ ಮಧ್ಯಾಹ್ನ 3:15 ಗಂಟೆಗೆ ಹೊರಟು, ಮರುದಿನ (ಬುಧವಾರ) ಮಧ್ಯಾಹ್ನ 12:00 ಗಂಟೆಗೆ ಕೊಟ್ಟಾಯಂ ತಲುಪಲಿದೆ.

ರೈಲು ಸಂಖ್ಯೆ 07372 ಕೊಟ್ಟಾಯಂನಿಂದ ನವೆಂಬರ್ 20ರಿಂದ 2025ರ ಜನವರಿ 15ರ ವರೆಗೆ ಪ್ರತಿ ಬುಧವಾರ ಮಧ್ಯಾಹ್ನ 3:00 ಗಂಟೆಗೆ ಹೊರಟು, ಮರುದಿನ (ಗುರುವಾರ) ಮಧ್ಯಾಹ್ನ 12:50 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್ ಮತ್ತು ಎಟ್ಟುಮನೂರು ನಿಲ್ದಾಣಗಳಲ್ಲಿ ನಿಲ್ಲಲಿದೆ. ರೈಲು 2 ಎಸಿ ಟು ಟೈರ್, 2 ಎಸಿ ತ್ರಿ ಟೈರ್, 6 ಸ್ಲೀಪರ್ ಕ್ಲಾಸ್, 6 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಎಸ್ಎಲ್ಆರ್​​ಡಿ ಸೇರಿದಂತೆ ಒಟ್ಟು 18 ಬೋಗಿಗಳನ್ನು ಒಳಗೊಂಡಿರಲಿದೆ.

ಪ್ರಯಾಣಿಕರು ಅಧಿಕೃತ ವೆಬ್​ಸೈಟ್​ಗೆ​ (www.enquiry.indianrail.gov.in) ಭೇಟಿ ನೀಡಿ, NTES ಅಪ್ಲಿಕೇಶನ್ ಬಳಸಿ ಅಥವಾ 139ಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಸಮಯವನ್ನು ಪರಿಶೀಲಿಸಬಹುದು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ
ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ - ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್​​ಪ್ರೆಸ್ ರೈಲುಗಳ ಅವಧಿ ವಿಸ್ತರಣೆ

ABOUT THE AUTHOR

...view details