ಹುಬ್ಬಳ್ಳಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲಿದೆ.
- ರೈಲು ಸಂಖ್ಯೆ 06231/06232 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು - ಕಲಬುರಗಿ - ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ (ಒಂದು ಟ್ರಿಪ್)
- ರೈಲು ಸಂಖ್ಯೆ 06231 ಅಕ್ಟೋಬರ್ 29ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಮಧ್ಯಾಹ್ನ 12 ಗಂಟೆಗೆ ಹೊರಟು, ಅದೇ ದಿನ ಕಲಬುರಗಿ ನಿಲ್ದಾಣ ರಾತ್ರಿ 10:15 ಗಂಟೆಗೆ ತಲುಪಲಿದೆ.
- ರೈಲು ಸಂಖ್ಯೆ 06232 ಅಕ್ಟೋಬರ್ 29ರಂದು ಕಲಬುರಗಿಯಿಂದ ರಾತ್ರಿ 11:30 ಗಂಟೆಗೆ ಹೊರಟು, ಮರುದಿನ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಕ್ಕೆ ಬೆಳಿಗ್ಗೆ 11:15 ಗಂಟೆಗೆ ತಲುಪಲಿದೆ.
ನಿಲುಗಡೆಗಳು:ಈ ರೈಲು ಎರಡೂ ದಿಕ್ಕುಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಮತ್ತು ಶಹಬಾದ್ ನಿಲ್ದಾಣಗಳಲ್ಲಿ ನಿಲ್ಲಲಿದೆ.