ಬೆಂಗಳೂರು/ಹುಬ್ಬಳ್ಳಿ:ದೀಪಾವಳಿ ಮತ್ತು ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆ, ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಮುಜಾಫರಪುರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಿದೆ.
1. ರೈಲು ಸಂಖ್ಯೆ 07373/07374 ಎಸ್ಎಸ್ಎಸ್ ಹುಬ್ಬಳ್ಳಿ-ಮುಜಾಫರಪುರ್-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ರೈಲು (ಒಂದು ಟ್ರಿಪ್).
ಅಕ್ಟೋಬರ್ 27ರಂದು ರೈಲು ಸಂಖ್ಯೆ 07373 ಹುಬ್ಬಳ್ಳಿಯಿಂದ ಸಂಜೆ 5:20 ಗಂಟೆಗೆ ಹೊರಟು, ಮುಜಫರ್‌ಪುರ ನಿಲ್ದಾಣವನ್ನು ಅಕ್ಟೋಬರ್ 29ರಂದು ಸಂಜೆ 4 ಗಂಟೆಗೆ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ ಅಕ್ಟೋಬರ್ 30ರಂದು ರೈಲು ಸಂಖ್ಯೆ 07374 ಮುಜಫರ್‌ಪುರದಿಂದ ಮಧ್ಯಾಹ್ನ 1:15 ಗಂಟೆಗೆ ಹೊರಟು, ಹುಬ್ಬಳ್ಳಿ ನಿಲ್ದಾಣಕ್ಕೆ ನವೆಂಬರ್ 1ರಂದು ಬೆಳಿಗ್ಗೆ 10:30 ಗಂಟೆಗೆ ಆಗಮಿಸಲಿದೆ.
ಈ ರೈಲು ಎರಡೂ ದಿಕ್ಕುಗಳಲ್ಲಿ ಧಾರವಾಡ, ಬೆಳಗಾವಿ, ಘಟಪ್ರಭಾ, ಮೀರಜ್, ಸಾಂಗ್ಲಿ, ಕರಾಡ್, ಸತಾರಾ ಪುಣೆ, ದೌಂಡ್ ಕಾರ್ಡ್ ಲೈನ್, ಅಹ್ಮದ್‌ನಗರ, ಕೋಪರ್‌ಗಾಂವ್, ಮನ್ಮಾಡ್, ಭೂಸಾವಲ್, ಖಾಂಡ್ವಾ, ಇಟಾರ್ಸಿ, ನರಸಿಂಗ್‌ಪುರ, ಜಬಲ್‌ಪುರ, ಕಟ್ನಿ, ಸತ್ನಾ, ಮಾಣಿಕ್‌ಪುರ, ಪ್ರಯಾಗ್‌ರಾಜ್ ಛೋಕಿ, ಪಂಡಿತ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್, ಬಕ್ಸಾರ್, ಅರಾ, ದಾನಾಪುರ, ಪಾಟ್ಲಿಪುತ್ರ, ಸೋನ್‌ಪುರ್ ಮತ್ತು ಹಾಜಿಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಈ ರೈಲು 2 ಎಸಿ 2-ಟೈರ್, 10 ಎಸಿ 3-ಟೈರ್, 5 ಸ್ಲೀಪರ್ ಕ್ಲಾಸ್ ಮತ್ತು 2 ಲಗೇಜ್, ಬ್ರೇಕ್ ಕಮ್ ಜನರೇಟರ್ ಕಾರುಗಳು ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.