ಹುಬ್ಬಳ್ಳಿ:ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯ ನಿರ್ಧರಿಸಿದೆ.
06597 ಸಂಖ್ಯೆಯ ರೈಲು ಅ.30ರಂದು ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳ ಮೂಲಕ ಮರುದಿನ ಬೆಳಗಿನ ಜಾವ 4 ಗಂಟೆಗೆ ಕಾರವಾರ ತಲುಪಲಿದೆ.
ಪುನಃ ಇದೇ ರೈಲು (06598) ಅ.31ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಹೊರಟು ಅದೇ ಮಾರ್ಗವಾಗಿ ಮರುದಿನ ಬೆಳಗಿನ ಜಾವ 4 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಈ ರೈಲಿನಲ್ಲಿ 4 ಜನರಲ್ ಸೆಕೆಂಡ್ ಕ್ಲಾಸ್, 10 ಸ್ಲೀಪರ್ ಕ್ಲಾಸ್, 2 ಎಸಿ ತ್ರಿ ಟೈಯರ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ಬ್ರೇಕ್ ವ್ಯಾನ್ಗಳು ಸೇರಿದಂತೆ 18 ಬೋಗಿಗಳು ಇರಲಿವೆ.