ಕಲಬುರಗಿ: ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗೆ ಬೆಂಗಳೂರಿನಜಯದೇವ ಹೃದ್ರೋಗ ಆಸ್ಪತ್ರೆ ರಾಜ್ಯ ಅಷ್ಟೇ ಅಲ್ಲ, ದೇಶ ವಿದೇಶದಲ್ಲೂ ಹೆಸರುವಾಸಿ. ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದೇಶ ಮತ್ತು ವಿದೇಶಗಳಿಂದಲೂ ಜನರು ಬರುತ್ತಾರೆ. ಇಂತಹ ಆಸ್ಪತ್ರೆ ಕಲಬುರಗಿಯಲ್ಲೂ ಬೇರೊಬ್ಬರಿ 377 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ.
ಬೆಂಗಳೂರಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಮೇಲೆ ಅದೆಷ್ಟೋ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಜನ ಅವಲಂಬಿತರಾಗಿದ್ದಾರೆ. ಅದರದಲ್ಲೂ ಕಲ್ಯಾಣ ಕರ್ನಾಟಕ ಭಾಗದ ಜನ ದೂರದ ಬೆಂಗಳೂರಿಗೆ ಹೋಗಿ ಚಿಕಿತ್ಸೆ ಪಡೆಯಲು ಹರಸಾಹಸ ಪಡುತ್ತಿದ್ದರು. ಇದೀಗ ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಕಲಬುರಗಿಯಲ್ಲೇ ನೂತನ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣವಾಗಿದ್ದು, ಇಂದು ಲೋಕಾರ್ಪಣೆಯಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 377 ಕೋಟಿ ರೂಪಾಯಿ ಅನುದಾನದಲ್ಲಿ ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 371(ಜೆ) ಕಾಯ್ದೆ ಜಾರಿಯಾಗಿ 10 ವರ್ಷ ಪೂರೈಸಿದ ನೆನಪಿಗಾಗಿ 371 ಬೆಡ್ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. 2016 ರಲ್ಲಿ ಜಿಮ್ಸ್ ಆಸ್ಪತ್ರೆ ಕಟ್ಟಡದಲ್ಲಿ 130 ಬೆಡ್‌ನಿಂದ ಆರಂಭವಾದ ಜಯದೇವ ಹೃದ್ರೋಗ ಆಸ್ಪತ್ರೆ ಇದೀಗ ಸ್ವಂತ ಕಟ್ಟಡ ಮತ್ತು ಅತ್ಯಾಧುನಿಕ ಸೌಕರ್ಯಗಳು ಒಳಗೊಂಡಂತೆ ಬೃಹತ್ ಸುಸಜ್ಜಿತ ಕಟ್ಟಡ ಲೋಕಾರ್ಪಣೆ ಆಗಿದೆ.