ಬೆಂಗಳೂರು:ಬಾಂಬ್ ಸ್ಫೋಟ ಸಂಭವಿಸಿದ್ದ ಬೆಂಗಳೂರಿನ ಐಟಿಪಿಎಲ್ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಎನ್ಐಎ ಸ್ಥಳ ಮಹಜರು ನಡೆಸಿದೆ. ಬಂಧಿತ ಉಗ್ರ ಮುಸಾವಿರ್ ಹುಸೇನ್ ಶಾಜೀಬ್'ನನ್ನು ಇಂದು ಕೆಫೆ ಬಳಿ ಕರೆತಂದು ಎನ್ಐಎ ಅಧಿಕಾರಿಗಳು ಆರೋಪಿಯ ಕೃತ್ಯದ ಮರುಸೃಷ್ಟಿ ಮಾಡಿಸಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.
ಕೃತ್ಯ ಮರುಸೃಷ್ಟಿಸಿ ಮಹಜರು:ಪ್ರಮುಖ ಆರೋಪಿಯಾಗಿರುವ ಮುಸಾವಿರ್ ಹುಸೇನ್ ಶಾಜಿಬ್, ಘಟನೆಯ ದಿನ ಕ್ಯಾಪ್ ಧರಿಸಿ ಕೆಫೆಗೆ ಹೇಗೆ ಬಂದ? ಎಷ್ಟು ನಿಮಿಷಗಳ ಕಾಲ ಕೆಫೆಯಲ್ಲಿ ಕುಳಿತಿದ್ದ? ಕುಳಿತಿದ್ದಷ್ಟು ಕಾಲ ಏನೇನು ಆರ್ಡರ್ ಮಾಡಿದ್ದ? ನಂತರ ಸ್ಫೋಟಕಗಳಿದ್ದ ಬ್ಯಾಗ್ ಹೇಗೆ ಇರಿಸಿ ವಾಪಸ್ ತೆರಳಿದ ಎಂಬ ಘಟನಾವಳಿಗಳನ್ನ ಆತನಿಂದಲೇ ಮರುಸೃಷ್ಟಿಸಿ ಮಹಜರು ಮಾಡಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆಫೆ ಸುತ್ತಮುತ್ತ 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನ ಭದ್ರತೆಗಾಗಿ ನಿಯೋಜಿಸಲಾಗಿದೆ.