ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಆರಂಭವಾಗುತ್ತಿರುವ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–1 ಏಪ್ರಿಲ್ 6 ರವರೆಗೆ ನಡೆಯಲಿದೆ. ಫಲಿತಾಂಶದ ಗುಣಮಟ್ಟ ಹೆಚ್ಚಳಕ್ಕಾಗಿ ಒಂದು ವರ್ಷದಲ್ಲಿ ಮೂರು ಪರೀಕ್ಷೆ ನಡೆಸುವ ಪದ್ಧತಿ ಜಾರಿಗೊಳಿಸಿದ ನಂತರ ನಡೆಯುತ್ತಿರುವ ಮೊದಲ ಪರೀಕ್ಷೆ ಇದಾಗಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ಧತೆ ನಡೆಸಿದೆ.
ರಾಜ್ಯದ ಒಟ್ಟು 2,750 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 4,41,910 ಬಾಲಕರು ಹಾಗೂ 4,28,058 ಬಾಲಕಿಯರು ಸೇರಿ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 8,10,368 ರೆಗ್ಯುಲರ್, 18,225 ಖಾಸಗಿ ಮತ್ತು 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.
ಸಿಸಿ ಕ್ಯಾಮರಾ ಅಳವಡಿಕೆ:ಪರೀಕ್ಷಾ ಅಕ್ರಮದ ಬಗ್ಗೆ ನಿಗಾವಹಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರಾಗಿ ನೇಮಿಸಲಾಗಿದೆ. ಡಯಟ್ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳಿಗೆ ವಿಚಕ್ಷಣ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
7 ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ:ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಬಿಸಿಯೂಟದ ವ್ಯವಸ್ಥೆ:ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ವೇಳಾಪಟ್ಟಿ:
ಮಾರ್ಚ್ 25:ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ಪ್ರಥಮ ಭಾಷೆ)