ಬೆಂಗಳೂರು: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 25ರಿಂದ ಎಸ್ಎಸ್ಎಲ್ಸಿ, ಮಾರ್ಚ್ 1 ರಿಂದ ಪಿಯುಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಶಿಕ್ಷಣ ಇಲಾಖೆಯು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ಅಡ್ಡಿ-ಆತಂಕವಿಲ್ಲದೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವಂತೆ ತಿಳಿಸಲಾಗಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ.
ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿ :
- ಮಾರ್ಚ್ 25 - ಪ್ರಥಮ ಭಾಷೆ ಪರೀಕ್ಷೆ - ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, + ಇಂಗ್ಲಿಷ್ NCERT, ಸಂಸ್ಕೃತ
- ಮಾ. 27- ಸಮಾಜ ವಿಜ್ಞಾನ ಪರೀಕ್ಷೆ.
- ಮಾ. 30 ರಂದು ವಿಜ್ಞಾನ, ರಾಜ್ಯಶಾಸ್ತ್ರ ಪರೀಕ್ಷೆ.
- ಏಪ್ರಿಲ್ 2 ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ.
- ಏ. 3ರಂದು ಅರ್ಥಶಾಸ್ತ್ರ ಪರೀಕ್ಷೆ
- ಏ.4 ತೃತೀಯ ಭಾಷೆ - ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ
- ಏ. 6 ದ್ವಿತೀಯ ಭಾಷೆ- ಇಂಗ್ಲಿಷ್, ಕನ್ನಡ