ಯಲಹಂಕ: ಎಸ್ಎಸ್ಎಲ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೋರ್ವ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಯಲಹಂಕ ತಾಲೂಕಿನ ಚಲ್ಲಹಳ್ಳಿಯ ಗುಟ್ಟೆ ವೇಣುಗೋಪಾಲಸ್ವಾಮಿ ಬೆಟ್ಟದ ಬಳಿ ಕಳೆದ ರಾತ್ರಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕು ಚಿಕ್ಕಮಧುರೆ ಗ್ರಾಮದ ಯೋಗೀಶ್ (16) ಮೃತ ವಿದ್ಯಾರ್ಥಿ. ಕಾಡನೂರು ಕ್ರಾಸ್ನ ಶ್ರೀರಾಮ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಸೋಮವಾರದಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ. ಓದಿನ ನಡುವೆ ವಿರಾಮ ತೆಗೆದುಕೊಂಡು ಚಲ್ಲಹಳ್ಳಿಯ ಸ್ನೇಹಿತರನ್ನು ಭೇಟಿಯಾಗಲು ಬೈಕ್ನಲ್ಲಿ ಹೋಗಿದ್ದಾನೆ. ಸ್ನೇಹಿತರನ್ನು ಭೇಟಿಯಾಗಿ ವಾಪಸ್ ಊರಿಗೆ ಬರುತ್ತಿದ್ದಾಗ ಮರಕ್ಕೆ ಬೈಕ್ ಗುದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.