ಹುಬ್ಬಳ್ಳಿ:"ಮಹಾದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದರೆ ಕೇಂದ್ರ ಸರ್ಕಾರ ಸಹಕಾರ ಕೊಡುತ್ತಿಲ್ಲ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, "ಅಂದು ಮಹಾದಾಯಿ ಯೋಜನೆ ಕಾಮಗಾರಿಗೆ ಪರವಾನಗಿ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ್ದರು. ಆದರೆ ಈಗ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ" ಎಂದರು.
ಇದೇ ವೇಳೆ ರಾಜ್ಯ ಬಜೆಟ್ ಬಗ್ಗೆ ಮಾತನಾಡುತ್ತಾ, "ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ. ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ" ಎಂದು ಹೇಳಿದರು.