ಕರ್ನಾಟಕ

karnataka

ETV Bharat / state

ಮುನಿರತ್ನ ವಿರುದ್ಧ ದಾಖಲಾದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರ - SIT To Investigate Muniratna Case - SIT TO INVESTIGATE MUNIRATNA CASE

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡವನ್ನು ರಚಿಸಿದೆ.

munirathna
ಮುನಿರತ್ನ (ETV Bharat)

By ETV Bharat Karnataka Team

Published : Sep 21, 2024, 6:32 PM IST

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ, ಜೀವ ಬೆದರಿಕೆ ಹಾಗೂ ಆತ್ಯಾಚಾರ ಪ್ರಕರಣ ಸೇರಿದಂತೆ ಇನ್ನಿತರ ಪ್ರಕರಣಗಳ ಸಮಗ್ರ ತನಿಖೆ ಸಂಬಂಧ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಆದೇಶಿಸಿದೆ.

ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ಅವರು ಎಸ್ಐಟಿ ತಂಡದ ಮುಖ್ಯಸ್ಥರಾಗಿದ್ದಾರೆ.‌ ಕೇಂದ್ರ ವಲಯದ ಐಜಿಪಿ ಲಾಬುರಾಮ್, ರೈಲ್ವೆ ಎಸ್​​ಪಿ ಸೌಮ್ಯಲತಾ ಹಾಗೂ‌ ಮತ್ತೋರ್ವ ಎಸ್​ಪಿ ಸೈಮನ್ ತನಿಖಾ ತಂಡದಲ್ಲಿದ್ದಾರೆ.

ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್​ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ, ಜೀವ ಬೆದರಿಕೆ ಹಾಗೂ ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯಲ್ಲಿ ಆತ್ಯಾಚಾರ‌ ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ಪ್ರಕರಣಗಳು ಹಾಗೂ ಇನ್ಮುಂದೆ ದಾಖಲಾಗಬಹುದಾದ ಪ್ರಕರಣಗಳ ಕುರಿತಂತೆ ಈ ವಿಶೇಷ ತನಿಖಾ ತಂಡವು ತನಿಖೆ ನಡೆಸಲಿದೆ.

ಸದ್ಯ, ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿಜೆಪಿ ಶಾಸಕ ಮುನಿರತ್ನಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ. ಇದಕ್ಕೂ ಮುನ್ನ ದಾಖಲಾದ ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಅವರಿಗೆ ಜಾಮೀನು ಲಭಿಸಿತ್ತು. ಇದರ ಬೆನ್ನಲ್ಲೇ ಗುರುವಾರ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ:ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ - Judicial Custody For Munirathna

ABOUT THE AUTHOR

...view details