ಬೆಂಗಳೂರು:ಕೋವಿಡ್ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವವರು ಫ್ರಿಡ್ಜ್ ನೀರು, ಐಸ್‌ಕ್ರೀಂ ಮತ್ತು ತಂಪು ಪಾನೀಯಗಳನ್ನು ಸೇವಿಸಬಾರದು ಎಂದು ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಇಂತಹ ವದಂತಿಗಳನ್ನು ನಂಬಬೇಡಿ ಎಂದು ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟೀಕರಣ ನೀಡಿದೆ.
ಕೋವಿಡ್ ಸಂದರ್ಭದಲ್ಲಿ ಕೋವಿಶೀಲ್ಡ್ ಹಾಕಿಸಿಕೊಂಡಿರುವವರು ಫ್ರಿಡ್ಜ್ ನೀರು, ಐಸ್‌ಕ್ರೀಂ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿದೆ ಎಂಬ ಸುಳ್ಳು ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ. ಈ ತಪ್ಪು ಮಾಹಿತಿ ಬಗ್ಗೆ ಜಾಗ್ರತಿ ವಹಿಸಿ. ಆರೋಗ್ಯ ಇಲಾಖೆಯು ಇಂತಹ ಯಾವುದೇ ಸೂಚನೆಯನ್ನು ಹೊರಡಿಸಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.