ಕರ್ನಾಟಕ

karnataka

ETV Bharat / state

ಶಾಂತಿ ಕದಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ: ಹು-ಧಾ ನೂತನ ಪೊಲೀಸ್ ಆಯುಕ್ತರ ಎಚ್ಚರಿಕೆ - Hubballi Dharwad Commissioner

ಸಾಮಾಜಿಕ ಶಾಂತಿಗೆ ಭಂಗ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹು-ಧಾ ನೂತನ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಎಚ್ಚರಿಸಿದ್ದಾರೆ.

commissioner-shashikumar
ಹು-ಧಾ ನೂತನ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ (ETV Bharat)

By ETV Bharat Karnataka Team

Published : Jul 4, 2024, 9:46 PM IST

ಹು-ಧಾ ನೂತನ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸುದ್ದಿಗೋಷ್ಟಿ (ETV Bharat)

ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುವವರು ಹಾಗೂ ಸಾರ್ವಜನಿಕರ ಶಾಂತಿ, ನೆಮ್ಮದಿ ಹಾಳು ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹು-ಧಾ ನೂತನ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಶಾಂತಿಗೆ ಭಂಗ ಉಂಟು ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ರೌಡಿಗಳನ್ನು ಮಟ್ಟ ಹಾಕಲು ಪರೇಡ್ ಮಾಡಲಾಗುತ್ತದೆ‌. ಕೆಟ್ಟ ರೌಡಿಗಳು, ಒಳ್ಳೆಯ ರೌಡಿಗಳು ಅಂತ ಏನಿಲ್ಲ. ಶಾಂತಿ ಕದಡುವವರ ಮೇಲೆ ಕ್ರಮ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈಗಾಗಲೇ ಹಿಂದಿನ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಠಾಣೆಗಳಿಗೆ ಭೇಟಿ ನೀಡಿದ್ದೇನೆ‌. ಹಿಂದಿನ ಪ್ರಕರಣ ನಡೆದ ಸೂಕ್ಷ್ಮ ಪ್ರದೇಶಗಳನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳತ್ತೇನೆ‌. ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡುವಾಗ ಸಾರ್ವಜನಿಕರ ಸಹಕಾರ ಬೇಕು ಎಂದರು‌.

ಗಾಂಜಾ, ಡ್ರಗ್ಸ್ ಕಡಿವಾಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಗಾಂಜಾ ಉಪಯೋಗ ಶೋಕಿಯಾಗಿ ಪರಿಣಮಿಸಿದ್ದು, ದೊಡ್ಡ ಸಮಸ್ಯೆಯಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಗಾಂಜಾ ಮಾರಾಟಕ್ಕೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು.

ಮಾದಕ ವಸ್ತುಗಳು ಮನುಷ್ಯರನ್ನು ಗೆದ್ದಲು ರೀತಿ ಹಾಳು ಮಾಡುತ್ತವೆ. ವಿದ್ಯಾರ್ಥಿಗಳಲ್ಲದೆ ಹಲವರು ಈ ಚಟಕ್ಕೆ ಬಿದ್ದಿದ್ದು, ತಡೆಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಹೆಣ್ಣು ಮಕ್ಕಳ ರಕ್ಷಣೆಗೆ ಕ್ರಮ: ಹು-ಧಾ ಅವಳಿನಗರದಲ್ಲಿ ಹೆಣ್ಣು ಮಕ್ಕಳ ರಕ್ಷಣೆಗಾಗಿ ಚೆನ್ನಮ್ಮ ಪಡೆಯಿದೆ. ಸಾರ್ವಜನಿಕರು ಕೂಡಾ ಈ ನಿಟ್ಟಿನಲ್ಲಿ ಮುಂದಾಗಬೇಕು. ಹೆಣ್ಣುಮಕ್ಕಳು ತಮ್ಮ ತೊಂದರೆಗಳ ಬಗ್ಗೆ ಧೈರ್ಯವಾಗಿ ಹೇಳಿಕೊಳ್ಳಬೇಕು. 112ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ಹೇಳಿದರು.

ಇದನ್ನೂ ಓದಿ:ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್​ ಆಗಿ ಎನ್ ಶಶಿಕುಮಾರ ಅಧಿಕಾರ ಸ್ವೀಕಾರ - Hubballi Dharawad Commissioner

ABOUT THE AUTHOR

...view details