ಕರ್ನಾಟಕ

karnataka

ETV Bharat / state

ಹಾವೇರಿ: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ - STUDENT SUICIDE - STUDENT SUICIDE

ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

Haveri
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ (ETV Bharat)

By ETV Bharat Karnataka Team

Published : Sep 2, 2024, 5:09 PM IST

ಹಾವೇರಿ : ಎಸ್ಎಸ್ಎಲ್​​ಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಬ್ಯಾಡಗಿ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಇಂದು ನಡೆದಿದೆ.

ಮೃತ ವಿದ್ಯಾರ್ಥಿನಿ ಹಾವೇರಿ ತಾಲೂಕಿನ ಭರಡಿ ಗ್ರಾಮದವರು. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಮೃತ ವಿದ್ಯಾರ್ಥಿನಿ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದರು. ನಂತರ ವಾಪಸ್ ಬಂದು ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ :ಬೆಂಗಳೂರು: ಆತ್ಮಹತ್ಯೆಗೆ ಶರಣಾದ ಮಗನ ಮೃತದೇಹದ ಮುಂದೆಯೇ ಪ್ರಾಣಬಿಟ್ಟ ತಾಯಿ - Mother Son Die

ABOUT THE AUTHOR

...view details