ಗಂಗಾವತಿ(ಕೊಪ್ಪಳ):ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥರಾದ ಘಟನೆ ತಾಲ್ಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.
ಒಂದರಿಂದ ಐದನೇ ತರಗತಿವರೆಗಿನ ಒಟ್ಟು 32 ಮಕ್ಕಳು ಮಂಗಳವಾರ ಶಾಲೆಗೆ ಹಾಜರಾಗಿದ್ದರು. ಮಧ್ಯಾಹ್ನದ ಬಿಸಿಯೂಟ ಮಾಡಿದ ಬಳಿಕ ಕೆಲವರಿಗೆ ವಾಂತಿಯಾಗಿದ್ದು, ಇನ್ನು ಕೆಲವರಿಗೆ ತಲೆಸುತ್ತು ಬಂದಿದೆ. ಮಕ್ಕಳು ಬಳಲುತ್ತಿರುವುದನ್ನು ಗಮನಿಸಿದ ಪೋಷಕರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪೈಕಿ ಆರು ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಒಳ ರೋಗಿಗಳನ್ನಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ.