ಗದಗ: ಗದಗ-ಬೆಂಗಳೂರು ವೋಲ್ವೋ ಬಸ್ ಸೇವೆ ಪುನಾರಂಭಗೊಳಿಸುವಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ತಮ್ಮ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್ ಅವರಿಗೆ ಮನವಿ ಮಾಡಿದ್ದಾರೆ.
ನಿರೀಕ್ಷೆಯಿಲ್ಲದೆ ಬೆಂಗಳೂರಿನಿಂದ ಗದಗಕ್ಕೆ ಸಂಚರಿಸುವ ವೋಲ್ವೋ ಬಸ್ ಸೇವೆ ರದ್ದುಗೊಳಿಸಲಾಗಿದೆ. ಇದಕ್ಕೆ ಯಾವುದೇ ವಿವರ ನೀಡಿಲ್ಲ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಈ ವಿಷಯದಲ್ಲಿ ತಕ್ಷಣವೇ ಚರ್ಚಿಸಬೇಕೆಂದು ವಿನಂತಿಸುತ್ತೇನೆ. ನಿಮ್ಮ ಸಹಕಾರ ತುಂಬಾ ಮೆಚ್ಚುಗೆಯಾಗುತ್ತದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್ ಅವರು ದಯವಿಟ್ಟು ಈ ಬಸ್ ಅನ್ನು ಮತ್ತೆ ಶುರುಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.