ಆನೇಕಲ್(ಬೆಂಗಳೂರು): ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.
ಬೆಂಗಳೂರು: ರಾಷ್ಟ್ರೀಯ ತನಿಖಾ ದಳದಿಂದ ಶಂಕಿತ ಉಗ್ರನ ಬಂಧನ - Suspected Terrorist Arrest
ಸೆಕ್ಯೂರಿಟಿ ಗಾರ್ಡ್ ಆಗಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.
ರಾಷ್ಟ್ರೀಯ ತನಿಖಾ ದಳ (IANS)
Published : Sep 26, 2024, 5:06 PM IST
ಅಸ್ಸಾಂ ಮೂಲದ 23 ವರ್ಷದ ಗಿರೀಶ್ ಬೊರವ್ ಎಂಬಾತನೇ ಶಂಕಿತ ಉಗ್ರ ಎಂದು ಗುರುತಿಸಲಾಗಿದೆ. ಆಗಸ್ಟ್ 10ರಂದು ಇಲ್ಲಿನ ಕಂಪನಿಯೊಂದರಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದ ಎಂದು ಮೂಲಗಳು ತಿಳಿಸಿವೆ. ಶಂಕಿತ ಉಗ್ರನು ಅಸ್ಸಾಂನ ಲಕ್ಷ್ಮಿಪುರ ಬೊಕಾಂಡಿ ಮೂಲದವ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ.
ಇದನ್ನೂ ಓದಿ:ಪೊಲೀಸರಿಗೆ ಸಿಗುವ ಮುನ್ನವೆ ಆರೋಪಿಯ ಆತ್ಮಹತ್ಯೆ: ಸವಾಲಾದ ಮಹಾಲಕ್ಷ್ಮಿ ಹತ್ಯೆ ಪ್ರಕರಣ - Mahalakshmi murder case