ಹುಬ್ಬಳ್ಳಿ:ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಪಣ ತೊಟ್ಟು ಕೆಲಸ ಮಾಡುತ್ತೇನೆ ಎಂದು ಸೈಯದ್ ಅಜ್ಜಂಪೀರ್ ಖಾದ್ರಿ ಹೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಹೇಳಿದರು.
ಶುಕ್ರವಾರ ನವನಗರದ ಹೆಸ್ಕಾಂ ಕಚೇರಿಯಲ್ಲಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ವೈಶಾಲಿ ಎಂ.ಎಲ್. ಅವರಿಂದ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿದ ಸೈಯದ್ ಅಜ್ಜಂಪೀರ್ ಖಾದ್ರಿ, "ರೈತ ದೇಶದ ಬೆನ್ನೆಲುಬು. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಭಾರತ ದೇಶದಲ್ಲಿ ಗೃಹ ಜ್ಯೋತಿ ಯೋಜನೆ ಮಾದರಿಯಾಗಿದೆ. ಇಲಾಖೆ ಅಧಿಕಾರಿಗಳ ಸಹಕಾರ ತೆಗೆದುಕೊಂಡು ಕಾರ್ಯನಿರ್ವಹಿಸುತ್ತೇನೆ. ಹೆಸ್ಕಾಂ ವ್ಯಾಪ್ತಿಯ ಪ್ರದೇಶಗಳಿಗೆ ಸಂಚರಿಸಿ, ಸಮಸ್ಯೆಗಳನ್ನು ಪರಿಹರಿಸಲಾಗುವುದು. ನಮ್ಮ ಸರ್ಕಾರ ಬಡವರು, ರೈತರು ಮತ್ತು ಕೂಲಿ ಕಾರ್ಮಿಕರ ಪರವಾಗಿದೆ. ಹೆಸ್ಕಾಂ ಸಂಸ್ಥೆ ಒಳ್ಳೆಯ ಕೆಲಸ ಮಾಡುವ ಸಂಸ್ಥೆಯಾಗಿರುತ್ತದೆ. ನನಗೆ ನೀಡಿರುವ ಜವಾಬ್ದಾರಿಯನ್ನು ಅರಿತು ಕೆಲಸ ಮಾಡುತ್ತೇನೆ" ಎಂದು ಭರವಸೆ ನೀಡಿದರು.
ಅಧಿಕಾರ ಸ್ವೀಕರಿಸಿದ ಸೈಯದ್ ಅಜ್ಜಂಪೀರ್ ಖಾದ್ರಿ ಅವರಿಗೆ ವಿವಿಧ ಧರ್ಮಗಳ ಧರ್ಮ ಗುರುಗಳು ಆರ್ಶೀವಚನ ನೀಡಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ, ಜವಳಿ-ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ, ವಸತಿ-ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಶಾಸಕರಾದ ಶ್ರೀನಿವಾಸ ಮಾನೆ, ಯಾಸೀರ್ ಖಾನ್ ಪಠಾಣ್, ಮಾಜಿ ಸಚಿವರಾದ ಎ. ಎಂ. ಹಿಂಡಸಗೇರಿ, ಮಾಜಿ ಸಂಸದರಾದ ಪ್ರೊ. ಐ. ಜಿ. ಸನದಿ ಸೇರಿದಂತೆ ಹೆಸ್ಕಾಂ ಇಲಾಖೆಯ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ:ಕುದುರೆ ಏರಿ ಬಂದ ಸಚಿವ ಜಮೀರ್ ಅಹಮ್ಮದ್ ಖಾನ್; ಭರ್ಜರಿ ಸ್ವಾಗತ ಕೋರಿದ ಬೆಂಬಲಿಗರು