ಕಾಂಗ್ರೆಸ್ ಪ್ರತಿಭಟನೆ (ETV Bharat) ಮೈಸೂರು:ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ. ಇದರ ಭಾಗವಾಗಿ ಮೈಸೂರು ಜಿಲ್ಲೆಯ ಟಿ.ನರಸೀಪುರ ನಗರದಲ್ಲಿ ಬಂದ್ ಆಚರಿಸಲಾಗಿದ್ದು, ಮೈಸೂರು ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಟಿ.ನರಸೀಪುರದಲ್ಲಿ ಬಂದ್ ಬಹುತೇಕ ಯಶಸ್ವಿಯಾಯಿತು. ನಗರದಲ್ಲಿ ಮೆರವಣಿಗೆ ನಡೆಸಿದ ಬಳಿಕ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಕಂಡುಬಂತು. ಬಳಿಕ ಪ್ರತಿಭಟನಾನಿರತರು ತಾಲ್ಲೂಕು ಕಚೇರಿಗೆ ಆಗಮಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದರು.
ಮೈಸೂರಿನಲ್ಲೂ ಬೃಹತ್ ಪ್ರತಿಭಟನೆ: ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕ ಸೇರಿದಂತೆ ವಿವಿಧ ರೀತಿಯ ಸಂಘಟನೆಗಳು ನಗರದ ಗಾಂಧಿ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಸಿದವು. ಬಳಿಕ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ಕರ್ನಾಟಕ ರಾಜ್ಯ ದೇಶದಲ್ಲಿ ಮಾದರಿ ರಾಜ್ಯವಾಗಿ ಆಡಳಿತ ಮಾಡುತ್ತಿದೆ. ಮೊನ್ನೆ ಸಂವಿಧಾನ ಮೌಲ್ಯಗಳನ್ನು ಎತ್ತಿ ಹಿಡಿಯುವ ಮಾತನಾಡಿದ್ದಾರೆ. ರಾಜ್ಯಪಾಲರು ಆಗಸ್ಟ್ 16ರಂದು ಮುಖ್ಯಮಂತ್ರಿಗಳ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ. ಜೆಡಿಎಸ್-ಬಿಜೆಪಿ ಎಂದೂ ಪ್ರಜಾಸತ್ತಾತ್ಮಕ ರಾಜ್ಯ ಆಡಳಿತ ನಡೆಸೇ ಇಲ್ಲ. ಮೈತ್ರಿ ಪಕ್ಷಗಳು ರಾಜಭವನವನ್ನು ರಾಜಕೀಯ ಕ್ರೀಡಾಂಗಣ ಮಾಡಿಕೊಂಡಿದೆ. 136 ಸ್ಥಾನಗಳೊಂದಿಗೆ ಸುಭದ್ರ ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರ ಮಾಡುಲು ರಾಜಕೀಯ ದ್ವೇಷದಿಂದ ಈ ಕೃತ್ಯ ಕೈ ಹಾಕಿದೆ ಎಂದರು.
ಇದನ್ನೂ ಓದಿ:ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ - Congress Protest Against Governor