ಕರ್ನಾಟಕ

karnataka

ETV Bharat / state

ಕ್ಲಾಸ್​ ರೂಮಿನಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಲಬುರಗಿಯಲ್ಲಿ ಶಿಕ್ಷಕನ ಬಂಧನ - Teacher Arrest - TEACHER ARREST

ಶಾಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

teacher arrest
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Aug 15, 2024, 7:10 AM IST

ಕಲಬುರಗಿ:ಶಾಲಾ ಕೊಠಡಿಯಲ್ಲೇ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಆಳಂದ ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೊಂದರ ಶಿಕ್ಷಕನನ್ನು ಬಂಧಿಸಲಾಗಿದೆ.

5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಶಾಲೆಯಲ್ಲಿ ಬಿಸಿ ಊಟ ಮುಗಿಸಿ, ಬಾಲಕಿ ಕ್ಲಾಸ್ ರೂಮಿಗೆ ತೆರಳಿದ್ದಳು. ಬಾಲಕಿಯ ಹಿಂದೆಯೇ ಹೋದ ಶಿಕ್ಷಕ, ತರಗತಿಯ ಬಾಗಿಲು ಮುಚ್ಚಿ, ಬಾಲಕಿಯಿಂದ ಕಿಟಕಿಗಳನ್ನು ಮುಚ್ಚಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಆಗ ಬಾಲಕಿ ಚೀರಾಡಿದ್ದು, ಆತ ಅಲ್ಲಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಬರಿಯಾದ ಬಾಲಕಿ ಮನೆಗೆ ಹೋಗಿ ಪೋಷಕರಿಗೆ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾಳೆ‌. ಪೋಷಕರು ನೇರವಾಗಿ ಶಾಲೆಗೆ ಬಂದು ಮುಖ್ಯೋಪಾಧ್ಯಯರ ಗಮನಕ್ಕೆ ತಂದು ನಂತರ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿ, ಜೈಲಿಗೆ ಕಳಿಸಿದ್ದಾರೆ.

ಶಿಕ್ಷಕ ಅಮಾನತು:ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ದೂರಿನ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಸಮಗ್ರ ಮಾಹಿತಿ ಕಲೆ ಹಾಕಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ವರದಿ ಸಲ್ಲಿಸಿದ್ದರು. ವರದಿ ತಲುಪಿದ ಬಳಿಕ ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿಕ್ಷಕನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ:ನೆಲಮಂಗಲ: ತಾವರೆ ಹೂವು ಕೀಳಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು! - Man Drowned In Lake

ABOUT THE AUTHOR

...view details