ಕರ್ನಾಟಕ

karnataka

ETV Bharat / state

ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ: ಪತ್ನಿ, ಅತ್ತೆ, ಬಾಮೈದನಿಗೆ ಷರತ್ತುಬದ್ಧ ಜಾಮೀನು - TECHIE ATUL SUBHASH DEATH CASE

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆತನ ಪತ್ನಿ ನಿಖಿತಾ ಸಿಂಘಾನಿಯಾ ಸೇರಿದಂತೆ ಮೂವರಿಗೆ​ ಷರತ್ತುಬದ್ದ ಜಾಮೀನು ಸಿಕ್ಕಿದೆ.

TECHIE ATUL SUBHASH DEATH CASE
ಆರೋಪಿಗಳು (ETV Bharat)

By ETV Bharat Karnataka Team

Published : Jan 4, 2025, 7:18 PM IST

ಬೆಂಗಳೂರು: ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಡೆತ್ ನೋಟ್ ಬರೆದು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆತನ ಪತ್ನಿ ನಿಖಿತಾ ಸಿಂಘಾನಿಯಾ ಸೇರಿದಂತೆ ಮೂವರಿಗೆ ಸಿಟಿ ಸಿವಿಲ್ ಕೋರ್ಟ್​ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.

ಜನವರಿ 4ರಂದೇ ಜಾಮೀನು ಅರ್ಜಿಯನ್ನು ಇತ್ಯರ್ಥಗೊಳಿಸಬೇಕು ಎಂದು ಹೈಕೋರ್ಟ್ ಸೂಚಿಸಿತ್ತು. ಇದಕ್ಕೂ ಮುನ್ನ ಜಾಮೀನು ಬಗ್ಗೆ ವಾದ - ಪ್ರತಿವಾದ ಆಲಿಸಿದ್ದ ಸಿಟಿ ಸಿವಿಲ್ ನ್ಯಾಯಾಲಯವು ಇಂದು ಜಾಮೀನು ಅರ್ಜಿಯನ್ನು ಪುರಸ್ಕರಿಸಿ, ಮೂವರು ಆರೋಪಿತರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ನಾಳೆ ಭಾನುವಾರದ ರಜೆ ಹಿನ್ನೆಲೆಯಲ್ಲಿ ಆರೋಪಿಗಳು ಸೋಮವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸರಿಂದ ಬಂಧಿತರಾಗಿದ್ದ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಹಾಗೂ ಬಾಮೈದ ಅನುರಾಗ್ ಸಿಂಘಾನಿಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿತ್ತು. ಇದಕ್ಕೆ ಆಕ್ಷೇಪಿಸಿದ್ದ ಸರ್ಕಾರದ ಪರ ಅಭಿಯೋಜಕರಾದ ಭಾಗಲಕ್ಷ್ಮೀ ಅವರು ಆರೋಪಿತರಿಗೆ ಜಾಮೀನು ನೀಡಬಾರದೆಂದು ತಕರಾರು ಅರ್ಜಿ ಸಲ್ಲಿಸಿ ಪ್ರಬಲ ವಾದ ಮಂಡಿಸಿದ್ದರು.

ಪತ್ನಿ ಹಾಗೂ ಮನೆಯವರು ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಸುದೀರ್ಘ ಡೆತ್ ನೋಟ್ ಬರೆದು ಡಿಸೆಂಬರ್​​ 9ರಂದು ಮಾರತ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನೆ ಕೊಳಲಿನಲ್ಲಿದ್ದ ಮನೆಯಲ್ಲಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಮೊಬೈಲ್​​ನಲ್ಲಿ ಮಾಡಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣವು ರಾಷ್ಟ್ರದೆಲ್ಲೆಡೆ ಚರ್ಚೆಗೆ ಕಾರಣವಾಗಿತ್ತು.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ 108ರ ಆತ್ಮಹತ್ಯೆ ಪ್ರಚೋದನೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಡಿ.20ರಂದು ನಿಖಿತಾಳನ್ನು ಹರಿಯಾಣದ ಗುರುಗ್ರಾಮ ಹಾಗೂ ತಾಯಿ ಹಾಗೂ ಸಹೋದರರನ್ನ ಉತ್ತರಪ್ರದೇಶದ ಪ್ರಯಾಗ್​ರಾಜ್​ನ ಹೋಟೆಲ್​​ವೊಂದರಲ್ಲಿ ಬಂಧಿಸಿದ್ದರು.

ಇದನ್ನೂ ಓದಿ: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ; ಆರೋಪಿ ನಿಖಿತಾ ಸಿಂಘಾನಿಯಾ ಜಾಮೀನು ಅರ್ಜಿ ವಿಚಾರಣೆ‌ ಇಂದು

ABOUT THE AUTHOR

...view details