ರಾಮನಗರ:ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಕಣ ರಂಗೇರಿದೆ. ಪಕ್ಷಾಂತರ ಪರ್ವ ಮುಂದುವರೆದಿದ್ದು, ಜೆಡಿಎಸ್ ಪಕ್ಷದ 9 ಮಂದಿ ಚನ್ನಪಟ್ಟಣ ನಗರಸಭೆ ಸದಸ್ಯರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಲೋಕಸಭಾ ಚುನಾವಣೆ ಸಮಯದಲ್ಲಿ ಜೆಡಿಎಸ್ಗೆ ಕಾಂಗ್ರೆಸ್ ಶಾಕ್ ನೀಡಿದೆ. ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ. ಸೇರಿದಂತೆ 9 ಮಂದಿ ಜೆಡಿಎಸ್ ಸದಸ್ಯರು ಜೆಡಿಎಸ್ ಪಕ್ಷವನ್ನು ತೊರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಎಂಎಲ್ಸಿ ಪುಟ್ಟಣ್ಣ ಸಮ್ಮುಖದಲ್ಲಿ ಡಿಕೆಶಿ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇವರ ಜತೆಗೆ ಪಕ್ಷೇತರ ಸದಸ್ಯೆ ಉಮಾ ಅವರೂ ಕಾಂಗ್ರೆಸ್ ಸೇರಿದರು.
ಚನ್ನಪಟ್ಟಣ ನಗರಸಭೆಯ ಒಟ್ಟು ಜೆಡಿಎಸ್ ಸದಸ್ಯರ ಪೈಕಿ ಮೂರನೇ ಒಂದರಷ್ಟು ಮಂದಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ಅಲ್ಲದೇ ತಮ್ಮನ್ನು ಕಾಂಗ್ರೆಸ್ ಸದಸ್ಯರು ಎಂದು ಪರಿಗಣಿಸಿ ನಗರಸಭೆಯಲ್ಲಿ ತಮಗೆ ಕಾಂಗ್ರೆಸ್ ಸದಸ್ಯರ ಜತೆ ಕೂರಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕೋರಿದ್ದಾರೆ.
ಸೇರ್ಪಡೆಗೊಂಡ ಸದಸ್ಯರು:ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ.,ರೇವಣ್ಣ ಎಂ.ಜೆ., ಎ. ಸತೀಶ್ ಬಾಬು, ಶ್ರೀನಿವಾಸಮೂರ್ತಿ, ಲೋಕೇಶ್ ಸಿ.ಜೆ., ನಾಗೇಶ್, ಸಯ್ಯದ್ ರಫೀಕ್ ಅಹ್ಮದ್ ಕುನುಮೀರಿ, ಅಭಿದಾಬಾನು, ಭಾನುಪ್ರಿಯಾ.
ಇದನ್ನೂ ಓದಿ:ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರ್ಪಡೆ - Sumalatha Ambareesh