ಕರ್ನಾಟಕ

karnataka

ETV Bharat / state

ವಿಜಯಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮೂವರು ಸಾವು - VIJAYAPUR ROAD ACCIDENT

ವಿಜಯಪುರ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ನಡೆದಿದೆ.

TERRIBLE ROAD ACCIDENT
ಅಪಘಾತದಲ್ಲಿ ಮೃತಪಟ್ಟವರು (ETV Bharat)

By ETV Bharat Karnataka Team

Published : Jan 24, 2025, 9:54 AM IST

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಮೃತರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರ್ಯ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಸದ್ಯ ಮೂವರ ಮೃತದೇಹಗಳನ್ನು ವಿಜಯಪುರಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ರಾಯಚೂರು ಬಳಿ ಬಸ್-ಟ್ರ್ಯಾಕ್ಟರ್ ಅಪಘಾತ; ನವವಿವಾಹಿತೆ, ಗರ್ಭಿಣಿ ಸಾವು, 18 ಮಂದಿಗೆ ಗಾಯ - BUS AND TRACTOR ACCIDENT

ABOUT THE AUTHOR

...view details