ಕರ್ನಾಟಕ

karnataka

ETV Bharat / state

ಮುಖ್ಯಮಂತ್ರಿಗಳು ಕರೆ ಮಾಡಿ ಆಶೀರ್ವಾದ ಮಾಡಿದ್ದಾರೆ: ಮೃಣಾಲ್ ಹೆಬ್ಬಾಳ್ಕರ್ - MRINAL HEBBALKAR

ಮೃಣಾಲ್ ಹೆಬ್ಬಾಳ್ಕರ್ ಅವರು ಸಿಎಂ ಕರೆ ಮಾಡಿ ತಾಯಿ ಆರೋಗ್ಯ ವಿಚಾರಿಸಿದ್ದಾರೆ ಎಂದಿದ್ದಾರೆ.

mrinal-hebbalkar
ಮೃಣಾಲ್ ಹೆಬ್ಬಾಳ್ಕರ್ (ETV Bharat)

By ETV Bharat Karnataka Team

Published : Jan 14, 2025, 2:35 PM IST

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ಕರೆ ಮಾಡಿ ತಾಯಿಯವರ ಆರೋಗ್ಯ ವಿಚಾರಿಸಿದ್ದಾರೆ. ಬೇಗ ಗುಣಮುಖರಾಗುವಂತೆ ಆಶೀರ್ವಾದ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಹೇಳಿದರು.

ಬೆಳಗಾವಿಯಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಅವರು ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಅಲ್ಲದೇ ಬಹಳಷ್ಟು ಶಾಸಕರು, ಎಂಎಲ್ಸಿಗಳು ಬೆಳಗ್ಗೆಯಿಂದ ಕರೆ ಮಾಡುತ್ತಿದ್ದಾರೆ. ಪ್ರತಿಯೊಬ್ಬರಿಗೂ ಘಟನೆ ಕುರಿತು ಮಾಹಿತಿ ನೀಡಿದ್ದೇನೆ ಎಂದರು.

ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿದರು. (ETV Bharat)

ಎಲ್ಲ ಕಾರ್ಯಕರ್ತರು, ಮುಖಂಡರಿಗೆ ಮನಸ್ಸಿನಿಂದ ಧನ್ಯವಾದ ಹೇಳುತ್ತೇನೆ. ನಿಮ್ಮೆಲ್ಲರ ಪ್ರೀತಿ, ಆಶೀರ್ವಾದದಿಂದ ತಾಯಿ ಗುಣಮುಖರಾಗುತ್ತಿದ್ದಾರೆ. ಅಪಘಾತ ಸಂಭವಿಸಿದ ರೀತಿ ನೋಡಿ ನನಗೂ ಗಾಬರಿಯಾಗಿತ್ತು‌. ಅಲ್ಲದೇ ಆಸ್ಪತ್ರೆಗೆ ಬಂದು ತಾಯಿಯವರನ್ನು ನೋಡಿದಾಗ ತುಂಬಾ ಭಯ ಉಂಟಾಗಿತ್ತು. ಆದರೆ, ಈಗ ನಿಮ್ಮೆಲ್ಲರ ಪ್ರೀತಿ, ಆಶೀರ್ವಾದದಿಂದ ಬಹಳ ಬೇಗ ಗುಣಮುಖರಾಗುತ್ತಿದ್ದಾರೆ. ಅವರ ಬೆನ್ನಿನಲ್ಲಿ ಮೂರ್ನಾಲ್ಕು ಸಣ್ಣ ಫ್ಯಾಕ್ಚರ್ ಆಗಿದೆ. ಸ್ವಲ್ಪ ಕೈಗೂ ಗಾಯವಾಗಿದೆ. ವೈದ್ಯರು ಕನಿಷ್ಠ 15 ದಿನ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ, ಮೊಮೆಂಟ್ ಮಾಡಲು ಆಗುತ್ತಿಲ್ಲ. ಆದ್ದರಿಂದ ವಿಶ್ರಾಂತಿ ಪಡೆಯುತ್ತಿದ್ದು, ಬಹಳ ಬೇಗನೇ ಮತ್ತೆ ಜನರ ಸೇವೆಗೆ ಬರಲಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಚನ್ನರಾಜ ಹಟ್ಟಿಹೊಳಿ ಅವರಿಗೆ ಕಿವಿ, ಗಲ್ಲ, ಕೈಗೆ ನೋವಾಗಿದೆ‌‌. ಅವರಿಗೆ ನಡೆದಾಡಲು ಸಾಧ್ಯವಾಗುತ್ತಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದಾರೆ. ಹಾಗಾಗಿ, ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಾರಿನ ಚಾಲಕ ಆರಾಮವಾಗಿದ್ದಾರೆ. ನಾನು ಮೊದಲು ಕಾಲ್ ಮಾಡಿದ್ದೆ ಅವರಿಗೆ. ಅವನೇ ನಿಂತುಕೊಂಡು ಎಲ್ಲವನ್ನೂ ನಿಭಾಯಿಸಿದ್ದಾನೆ. ವೈದ್ಯರು ಔಷಧಿ ಕೊಟ್ಟ ಬಳಿಕ ಡಿಸ್ಚಾರ್ಜ್ ಮಾಡಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದರು‌.

ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಆಸ್ಪತ್ರೆಗೆ ಬರುತ್ತಿರುವುದರಿಂದ ಬೇರೆ ರೋಗಿಗಳಿಗೆ ತೊಂದರೆ ಆಗುತ್ತದೆ. ಹಾಗಾಗಿ, ಎಲ್ಲರೂ ಮನೆಯಲ್ಲೇ ಇದ್ದುಕೊಂಡು ಆಶೀರ್ವಾದ ಮಾಡಿ. ಮನೆಗೆ ಬಂದ ಮೇಲೆ ಪ್ರತಿಯೊಬ್ಬರನ್ನೂ ಭೇಟಿಯಾಗುತ್ತೇವೆ. ಆದ್ದರಿಂದ ಯಾರೂ ಆಸ್ಪತ್ರೆ ಬಳಿ ಬರಬೇಡಿ ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ:ಕಿತ್ತೂರು ಬಳಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು - LAKSHMI HEBBALKAR CAR ACCIDENT

ABOUT THE AUTHOR

...view details