ಕರ್ನಾಟಕ

karnataka

ETV Bharat / state

ಮತ ಚಲಾವಣೆಗೆ ಅವಕಾಶ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ - Vinay Kulkarni - VINAY KULKARNI

ಮತ ಚಲಾವಣೆಗೆ ಅವಕಾಶ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ (ETV Bharat)

By ETV Bharat Karnataka Team

Published : May 7, 2024, 7:39 AM IST

ಬೆಂಗಳೂರು:ಲೋಕಸಭೆ ಚುನಾವಣೆಯಲ್ಲಿ ಮತ ಹಾಕುವುದಕ್ಕೆ ಧಾರವಾಡ ಪ್ರವೇಶಿಸಲು ಅನುಮತಿ ನೀಡುವಂತೆ ಕೋರಿ ಬಿಜೆಪಿ ಮುಖಂಡ ಯೋಗೇಶಗೌಡ ಕೊಲೆ ಪ್ರಕರಣದ ಆರೋಪಿಯಾದ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅರ್ಜಿ ತಿರಸ್ಕರಿಸಿ ಆದೇಶಿಸಿದ್ದಾರೆ. ಅಲ್ಲದೆ, ಅರ್ಜಿದಾರರು ಧಾರವಾಡ ಜಿಲ್ಲೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದ್ದು, ಈಗಾಗಲೇ ಹಲವು ಬಾರಿ ವಿವಿಧ ಕಾರಣಗಳಿಗಾಗಿ ಅವರು ಧಾರವಾಡ ಪ್ರವೇಶ ಕೋರಿ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಗಳೆಲ್ಲ ತಿರಸ್ಕೃತಗೊಂಡಿವೆ. ಹಾಗಾಗಿ, ಈ ಅರ್ಜಿಯನ್ನೂ ಮಾನ್ಯ ಮಾಡಬಾರದು ಎಂದು ತನಿಖಾಧಿಕಾರಿಗಳ ಪರ ವಕೀಲರ ವಾದಿಸಿದ್ದರು.

ಇದನ್ನೂ ಓದಿ:ರಾಜ್ಯದ 14 ಕ್ಷೇತ್ರಗಳಿಗೆ 2ನೇ ಹಂತದ ಮತದಾನ, 227 ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರ - Lokasabha election 2024

ABOUT THE AUTHOR

...view details